
ಪ್ರಗತಿವಾಹಿನಿ ಸುದ್ದಿ: 8 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಪೈಶಾಚಿಕ ಘಟನೆ ರಾಜ್ಯದಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ತಾಯಿಯಿಲ್ಲದ 8 ವರ್ಷದ ತಬ್ಬಲಿ ಮಗುವಿನ ಮೇಲೆ ಪಕ್ಕದ ಮನೆಯ 35 ವರ್ಷದ ವ್ಯಕ್ತಿ ನಂಬಿಸಿ ಕರೆದೊಯ್ದು ಈ ಕೃತ್ಯವೆಸಗಿದ್ದಾನೆ.
ಧನರಾಜ್ ಕಾಂಬಳೆ ಅತ್ಯಾಚಾರ ಎಸಗಿರುವ ಆರೋಪಿ. ತಾಯಿಯನ್ನು ಕಳೆದುಕೊಂಡಿದ್ದ ಮಗಳನ್ನು ತಂದೆ ಒಬ್ಬಳನ್ನೇ ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಪಕ್ಕದ ಮನೆಯ ಧನರಾಜ್ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ.
ಬಾಲಕಿಯನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತ ಬಾಲಕಿಯ ತಂದೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.

