Kannada NewsKarnataka NewsLatest

*ಬೈಕ್-ಟ್ರ್ಯಾಕ್ಟರ್ ಭೀಕರ ಅಪಘಾತ: ಶಿಕ್ಷಕಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಜನಗಣತಿ ಮಾಹಿತಿ ನೀಡಲು ತೆರಳುತ್ತಿದ್ದ ವೇಳೆ ಬೈಕ್ ಗೆ ಕಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಶಿಕ್ಷಕಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ ಮುಖ್ಯರಸ್ತೆಯ ಕನ್ನಳ್ಳಿ ಚೆಕ್‌ಪೋಸ್ಟ್ ಬಳಿ ಈ ಅಪಘಾತ ಸಂಭವಿಸಿದೆ. ಪೂರ್ಣಿಮಾ ಗಣಪತಿ ಭಟ್ (47) ಮೃತ ಶಿಕ್ಷಕಿ. ಬಸವಗಿರಿ ಕೊಲಸಿರ್ಸಿ ಕ್ರಾಸ್ ನಿವಾಸಿ.

ಸಿದ್ದಾಪುರ ಪಟ್ಟಣದ ಹೊಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ಣಿಮಾ ಸಹ-ಶಿಕ್ಷಕಿಯಾಗಿದ್ದ ಪೂರ್ಣಿಮಾ ಜನಗಣತಿ ಮಾಹಿತಿ ನೀಡಲು ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಕಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಪೂರ್ಣಿಮಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಮೂಲದ ಟ್ರ್ಯಾಕ್ಟರ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button