EducationKannada NewsLatestNational

*ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ ನಡೆಸಲಾಗುವುದು. ಕಂಪ್ಯೂಟರ್ ಆಧಾರಿತ ನೀಟ್ ಪರೀಕ್ಷೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಧರ್ಮೇಂದ್ರ ಪ್ರಧಾನ್, ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಆನ್ ಲೈನ್ ಪರೀಕ್ಷೆಗೆ ತಯಾರಿ ನಡೆಸಲಾಗಿದೆ ಎಂದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದರ ಜವಾಬ್ದಾರಿ ನಾವು ತೆಗೆದುಕೊಳ್ಳುತ್ತೇವೆ. ಸಚಿವಾಲಯ ಇದನ್ನು ಸರಿಪಡಿಸಲಿದೆ. ಮೇ 3ರಂದು ನಡೆಸಲಾಗಿದ್ದ ನೀಟ್ ಪರೀಕ್ಷೆಯನ್ನು ಈಗಾಗಲೇ ರದ್ದುಗೊಳಿಸಲಾಗಿದ್ದು, ಜೂನ್ 21ಕ್ಕೆ ಮರುಪರೀಕ್ಷೆ ದಿನಾಂಕ ನಿಗದಿಪಡಿಸಲಾಗಿದೆ ಎಂದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದ್ದು, ತನಿಖೆ ಮುಂದುವರೆದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ವಿದ್ಯಾರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದರು.

Home add -Advt


Related Articles

Back to top button