Film & EntertainmentKannada NewsLatest

*ರಜನಿಕಾಂತ್ ಅಭಿನಯದ ಜೈಲರ್-2 ಸಿನಿಮಾ ಚಿತ್ರೀಕರಣದ ವೇಳೆ ವಿದ್ಯುತ್ ಅವಘಡ: ಓರ್ವ ಸಾವು*

ಪ್ರಗತಿವಾಹಿನಿ ಸುದ್ದಿ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಚಿತ್ರ ಜೈಲರ್-2 ಸಿನಿಮಾ ಚಿತ್ರೀಕರಣದ ವೇಳೆ ದುರಂತವೊಂದು ಸಂಭವಿಸಿದೆ. ಭೀಕರ ವಿದ್ಯುತ್ ಅವಘಡ ಸಭವಿಸಿದ್ದು, ಓರ್ವ ಸಾವನ್ನಪ್ಪಿದ್ದಾರೆ.

ಚೆನ್ನೈನ ಪಣಯೂರ್ ನಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದ ವೇಳೆ ವಿದ್ಯುತ್ ಅವಘಡ ಸಂಭವಿಸಿದ್ದು, ವಿದ್ಯುತ್ ತಂತಿ ತಗುಲಿ ಓರ್ವ ಸಾವನ್ನಪ್ಪಿದ್ದಾರೆ. ಸಿಬ್ಬಂದಿ ಕಾರ್ತಿಕೇಯನ್ ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ಜೈಲರ್-2 ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ನಡೆಯುತ್ತಿತ್ತು. ಸಿನಿಮಾ ಸೆಟ್ ನಲ್ಲಿಯೇ ಈ ದುರಂತ ಸಂಭವಿಸಿದೆ.

Related Articles

Back to top button