Belagavi NewsBelgaum NewsKannada NewsKarnataka NewsLatest

*ಬೆಳಗಾವಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸವದತ್ತಿ ತಾಲ್ಲೂಕು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸವದತ್ತಿ ತಾಲ್ಲೂಕು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 10 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 19 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾ ಕಛೇರಿಯಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು ಮೇ.14 2026 ರಿಂದ ಜೂನ್ 16 2026 ರ ಸಂಜೆ 5.30 ಗಂಟೆಯೊಳಗಾಗಿ ಭರ್ತಿಮಾಡಿದ ಅರ್ಜಿಗಳನ್ನು ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ದಿನಾಂಕ ಮತ್ತು ಸಮಯದೊಳಗೆ ಎಲ್ಲಾ ದಾಖಲಾತಿಗಳನ್ನೊಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಸವದತ್ತಿ ತಾಲ್ಲೂಕು, ಈ ಕಛೇರಿಗೆ ಖುದ್ದಾಗಿ ಅಥವಾ ಅಂತಿಮ ದಿನಾಂಕ ಮತ್ತು ಸಮಯದೊಳಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾ ಕಛೇರಿಗೆ ತಲುಪುವಂತೆ ನೋಂದಾಯಿತ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Home add -Advt

ಹೆಚ್ಚಿನ ಮಾಹಿತಿಗಾಗಿ ಸವದತ್ತಿ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದೂರವಾಣಿ ಸಂಖ್ಯೆ 08330-295150 ಗೆ ಸಂಪರ್ಕಿಸಬಹುದು ಎಂದು ಸವದತ್ತಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಮದುರ್ಗ ತಾಲ್ಲೂಕು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಮದುರ್ಗ ತಾಲ್ಲೂಕು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 3 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 33 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾ ಕಛೇರಿಯಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು ಮೇ.14 2026 ರಿಂದ ಜೂನ್ 16 2026 ರ ಸಂಜೆ 5.30 ಗಂಟೆಯೊಳಗಾಗಿ ಭರ್ತಿಮಾಡಿದ ಅರ್ಜಿಗಳನ್ನು ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ದಿನಾಂಕ ಮತ್ತು ಸಮಯದೊಳಗೆ ಎಲ್ಲಾ ದಾಖಲಾತಿಗಳನ್ನೊಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ರಾಮದುರ್ಗ ತಾಲ್ಲೂಕು ಈ ಕಛೇರಿಗೆ ಖುದ್ದಾಗಿ ಅಥವಾ ಅಂತಿಮ ದಿನಾಂಕ ಮತ್ತು ಸಮಯದೊಳಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾ ಕಛೇರಿಗೆ ತಲುಪುವಂತೆ ನೊಂದಾಯಿತ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ರಾಮದುರ್ಗ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದೂರವಾಣಿ ಸಂಖ್ಯೆ 08335-241913 ಗೆ ಸಂಪರ್ಕಿಸಬಹುದು ಎಂದು ರಾಮದುರ್ಗ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ ನಗರ ತಾಲ್ಲೂಕು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿಶು ಅಭಿವೃದ್ಧಿ ಯೋಜನೆ ಬೆಳಗಾವಿ ನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಖಾಲಿಯಿರುವ 36 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಆಯ್ಕೆ ಮಾಡಲು ಅರ್ಹ ಸ್ಥಳೀಯ ಮಹಿಳಾ ಹಾಗೂ ಅಂಗತ್ವ ಅಲ್ಪಸಂಖ್ಯಾರ ಮಹಿಳೆಯರಿಂದ ಆಪ್ ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾ ಕಛೇರಿಯಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು ಮೇ.14 2026 ರಿಂದ ಜೂನ್ 16 2026 ರ ಸಂಜೆ 5.30 ಗಂಟೆಯೊಳಗಾಗಿ ಭರ್ತಿಮಾಡಿದ ಅರ್ಜಿಗಳನ್ನು ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ದಿನಾಂಕ ಮತ್ತು ಸಮಯದೊಳಗೆ ಎಲ್ಲಾ ದಾಖಲಾತಿಗಳನ್ನೊಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳಗಾವಿ ನಗರ ತಾಲ್ಲೂಕು ಈ ಕಛೇರಿಗೆ ಖುದ್ದಾಗಿ ಅಥವಾ ಅಂತಿಮ ದಿನಾಂಕ ಮತ್ತು ಸಮಯದೊಳಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾ ಕಛೇರಿಗೆ ತಲುಪುವಂತೆ ನೊಂದಾಯಿತ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಬೆಳಗಾವಿ ನಗರ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದೂರವಾಣಿ ಸಂಖ್ಯೆ 8031-2007020 ಗೆ ಸಂಪರ್ಕಿಸಬಹುದು ಎಂದು ಬೆಳಗಾವಿ ನಗರ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button