*ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲಿ: ರಾಹುಲ್ ಗಾಂಧಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪರೀಕ್ಷೆ ನಡೆಯುವ ಎರಡು ದಿನಗಳ ಮೊದಲೇ ಪ್ರಶ್ನೆಪತ್ರಿಕೆ ವಾಟ್ಸಾಪ್ನಲ್ಲಿ ಹರಿದಾಡುತ್ತಿತ್ತು ಎಂಬುದು ಇಡೀ ದೇಶಕ್ಕೆ ತಿಳಿದಿರುವ ಸತ್ಯ ಹಾಗಾಗಿ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಈ ಹಗರಣದ ಹಿಂದೆ ವ್ಯವಸ್ಥಿತವಾದ ಜಾಲವೊಂದು ಕೆಲಸ ಮಾಡುತ್ತಿದೆ. ಭಾರತದ ಶಿಕ್ಷಣ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಹಣ ಮಾಡುವ ಉದ್ದೇಶದಿಂದ ಬಿಜೆಪಿ ಮತ್ತು ಆರ್.ಎಸ್.ಎಸ್ ಕೈಜೋಡಿಸಿವೆ ಎಂದು ಗಂಭೀರ ಆರೋಪ ಮಾಡಿದರು.
ಈ ರೀತಿಯ ಪರೀಕ್ಷಾ ಅಕ್ರಮಗಳು ದೇಶದಲ್ಲಿ ಪದೇ ಪದೇ ಮರುಕಳಿಸುತ್ತಿದ್ದು ಸುಮಾರು 80ಕ್ಕೂ ಹೆಚ್ಚು ಬಾರಿ ವಿವಿಧ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ದೇಶದ ಶೈಕ್ಷಣಿಕ ಘನತೆಗೆ ಧಕ್ಕೆ ತಂದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಚಾರದಲ್ಲಿ ಮೌನ ವಹಿಸಿರುವುದನ್ನು ಅವರು ಪ್ರಶ್ನಿಸಿದ್ದಾರೆ.




