Kannada NewsKarnataka NewsNationalPolitics

*ಐತಿಹಾಸಿಕ ಸ್ಟಾಂಡಿಂಗ್ ಆರ್ಡರ್-1060 ಜಾರಿ ಮಾಡಿದ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ*

ಪ್ರಗತಿವಾಹಿನಿ ಸುದ್ದಿ : ಪೊಲೀಸ್ ಇಲಾಖೆಯಲ್ಲಿ ಪಾರದರ್ಶಕತೆ ತರಲು ಮತ್ತು ಮಾನವ ಹಕ್ಕುಗಳನ್ನು ಕಟ್ಟುನಿಟ್ಟಾಗಿ ರಕ್ಷಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ‘ಸ್ಟಾಂಡಿಂಗ್ ಆರ್ಡರ್-1060’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದ್ದಾರೆ.

ಈ ಮೂಲಕ ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಇನ್ಮುಂದೆ ಲಾಕಪ್ ಹಾಗೂ ಆರೋಪಿಗಳ ಮೇಲಿನ ದೌರ್ಜನ್ಯಗಳಿಗೆ ಶಾಶ್ವತ ಬ್ರೇಕ್ ಬೀಳಲಿದೆ. ಹೊಸದಾಗಿ ಜಾರಿಗೆ ಬಂದಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಅಡಿಯಲ್ಲಿ ಈ ಕಠಿಣ ನಿಯಮಾವಳಿಗಳನ್ನು ರೂಪಿಸಲಾಗಿದೆ. 

ಈ ಹೊಸ ಆದೇಶದ ಪ್ರಕಾರ, ಯಾವುದೇ ಶಂಕಿತ ಅಥವಾ ಆರೋಪಿಯನ್ನು ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವಾಗ ಮತ್ತು ಲಾಕಪ್‌ನಲ್ಲಿ ಇರಿಸುವಾಗ ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು.

ಬಂಧನದ ಪ್ರಕ್ರಿಯೆ ಮತ್ತು ವಿಚಾರಣೆಯ ಸಂಪೂರ್ಣ ವಿವರಗಳು ಸಿಸಿಟಿವಿ ಕ್ಯಾಮೆರಾಗಳ ಕಣ್ಣಾವಲಿನಲ್ಲಿ ಇರಬೇಕಾಗುತ್ತದೆ. ಒಂದು ವೇಳೆ ಯಾವುದೇ ಪೊಲೀಸ್ ಠಾಣೆಯಲ್ಲಿ ಕಾನೂನು ಉಲ್ಲಂಘಿಸಿ ಆರೋಪಿಗಳ ಮೇಲೆ ದೈಹಿಕ ಅಥವಾ ಮಾನಸಿಕ ಕಿರುಕುಳ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಲಾಕಪ್ ಡೆತ್ ಸಂಭವಿಸಿದರೆ ಅದಕ್ಕೆ ಸಂಬಂಧಪಟ್ಟ ಠಾಣಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಕರ್ತವ್ಯ ಲೋಪವೆಸಗುವ ಸಿಬ್ಬಂದಿಗೆ ಇಲಾಖೆಯ ವತಿಯಿಂದ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಎಚ್ಚರಿಸಲಾಗಿದೆ.

Home add -Advt

Related Articles

Back to top button