Kannada NewsKarnataka NewsLatest

*ದುಬಾರೆ ಆನೆ ಶಿಬಿರದಲ್ಲಿ ಆನೆಗಳ ಕಾದಾಟಕ್ಕೆ ಮಹಿಳೆ ಸಾವು ಪ್ರಕರಣ: ಪ್ರವಾಸಿಗರಿಗೆ ಹೊಸ ಗೈಡ್ ಲೈನ್ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣ ದುಬಾರಿ ಆನೆ ಶಿಬಿರದಲ್ಲಿ ಎರಡು ಆನೆಗಳ ಕಾದಾಟದಲ್ಲಿ ಪ್ರವಾಸಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ, ಪ್ರವಾಸಿಗರಿಗೆ ಮಾರ್ಗಸೂಚಿ ಪ್ರಕಟಿಸಿದೆ.

ಇನ್ಮುಂದೆ ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿರುವ ಎಲ್ಲ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ರೂಪಿಸುವಂತೆ ಮತ್ತು 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಆದೇಶಿಸಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಈಶ್ವರ್ ಖಂಡ್ರೆ, ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ ಕಾದಾಟದ ವೇಳೆ ಮಹಿಳೆ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದಿದ್ದಾರೆ.

ಪರಿಸರ ಪ್ರವಾಸೋದ್ಯಮದ ಚಾರಣಪಥಗಳಲ್ಲಿ ಚಾರಣಿಗರ/ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಪ್ರಮಾಣಿತ ಕಾರ್ಯಾಚರಣೆ ವಿಧಾನ ರೂಪಿಸಲಾಗಿದ್ದು, ಈ ಎಸ್‌ಒಪಿ ಜಾರಿ ಖಚಿತಪಡಿಸಿಕೊಳ್ಳುವವರೆಗೆ ಚಾರಣಪಥಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಈಗಾಗಲೇ ಸೂಚಿಸಲಾಗಿದೆ. ಅದೇ ಪ್ರಕಾರವಾಗಿ ಸಾಕಾನೆ ಶಿಬಿರಗಳಿಗೆ ಬರುವ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಎಸ್‌ಒಪಿ ರೂಪಿಸಲು ನಿರ್ದೇಶನ ನೀಡಿದ್ದಾರೆ.

Home add -Advt

ರಾಜ್ಯದಲ್ಲಿರುವ ಎಲ್ಲ ಸಾಕಾನೆ ಶಿಬಿರದಲ್ಲಿ ಇಂದಿನಿಂದಲೇ ಪ್ರವಾಸಿಗರು ಆನೆಯ ಬಳಿ ಹೋಗದಂತೆ, ಕನಿಷ್ಠ 100 ಅಡಿ ದೂರದಲ್ಲಿ ನಿಂತು ಆನೆ ಮೈತೊಳೆಯುವುದನ್ನು ವೀಕ್ಷಿಸುವಂತೆ ಮತ್ತು ಯಾವುದೇ ಕಾರಣಕ್ಕೂ ಆನೆಗಳ ಬಳಿ ಹೋಗಿ ಸೆಲ್ಫಿ, ಫೋಟೋ ತೆಗೆಸಿಕೊಳ್ಳಲು, ಮೈತೊಳೆಯಲು ಅವಕಾಶ ನೀಡದಂತೆ ಮತ್ತು ಬಾಳೆಹಣ್ಣು, ಬೆಲ್ಲ, ಕಬ್ಬು ಇತ್ಯಾದಿ ಯಾವುದೇ ಆಹಾರವನ್ನು ಪ್ರವಾಸಿಗರ ಕೈಯಿಂದ ತಿನ್ನಸದಂತೆ ಆದೇಶ ಹೊರಡಿಸಲು ಸೂಚಿಸಿದ್ದಾರೆ.

Related Articles

Back to top button