Kannada NewsKarnataka NewsLatest

*ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಬೆಂಗಳೂರಿನಲ್ಲಿ ಸುರುದ ಧಾರಾಕಾರ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ರಸ್ತೆಗಳು ಜಲಾಅವೃತಗೊಂಡಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ವಾಹನ ಸವಾರರು, ನಿವಾಸಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇಂದು ಕೂಡ ಬೆಂಗಳೂರಿನಲ್ಲಿ ಮಳೆಯಾಗಲಿದೆ. ಬೆಂಗಖೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಮಳೆಯಾಗಲಿದೆ.

ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲಿಯೂ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ.


Home add -Advt

Related Articles

Back to top button