*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ಪ್ರಯತ್ನದ ಫಲ: ಬೆಳಗಾವಿ ಗ್ರಾಮೀಣ ಕ್ಷೇತ್ರದ ನಾಲ್ಕು ಗ್ರಾಮಗಳಲ್ಲಿ ಕೋಟ್ಯಂತರ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ ಅನುದಾನದಡಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಗೋಜಗಾ-ಬೆಕ್ಕಿನಕೇರಿ, ಎಳೇಬೈಲ್, ಬೆಳಗುಂದಿ ಹಾಗೂ ಬಿಜಗರಣಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
ಗೋಜಗಾ-ಬೆಕ್ಕಿನಕೇರಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸುಮಾರು 2 ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿದರು. ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗುವಂತೆ ಗುಣಮಟ್ಟದ ರಸ್ತೆ ನಿರ್ಮಾಣ ಕೈಗೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು.
ಎಳೇಬೈಲ್ ಗ್ರಾಮದಲ್ಲಿ ಸುಮಾರು 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
ಬೆಳಗುಂದಿ ಗ್ರಾಮದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದ ಗ್ರಾಮದೊಳಗಿನ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಗ್ರಾಮದಲ್ಲಿ ಸುಗಮ ಸಂಚಾರ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಈ ರಸ್ತೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
ಬಿಜಗರಣಿ ಗ್ರಾಮದಲ್ಲಿಯೂ ಸುಮಾರು 1.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಈ ಯೋಜನೆಯಿಂದ ರೈತರಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಲಾಯಿತು.
ಈ ಕಾರ್ಯಕ್ರಮಗಳಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಳು ದೇಸೂರಕರ್, ಶಿವಾಜಿ ಬೋಕಡೆ, ಅಶೋಕ ಗಾವಡಾ, ಶಿವಾಜಿ ಬೆಟಗೇರಿಕರ್, ರೆಹಮಾನ್ ತಹಶೀಲ್ದಾರ, ಮೊನಪ್ಪ ಪಾಟೀಲ, ಸಂಪತ್ ಕಡೋಲ್ಕರ್, ಶಿವಾಜಿ ಮಂಡೋಳ್ಕರ್, ಮಹಾದೇವ ಪಾಟೀಲ, ಲಕ್ಷ್ಮಣ ಮುತಗಾರ್, ಮನೋಹರ್ ಬೆಳಗಾಂವ್ಕರ್, ಅಪ್ಪಾ ಜಾಧವ್, ಪುಂಡಲೀಕ್ ಜಾಧವ್, ಪರಶುರಾಮ ಭಾಸ್ಕಳ, ಯಲ್ಲಪ್ಪ ಬೆಳಗಾಂವ್ಕರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮದ ಹಿರಿಯರು, ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.



