
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ, ವತಿಯಿಂದ ಮೇ. 25 2026 ರ ಬೆಳಗ್ಗೆ 9.30 ರಿಂದ ಮದ್ಯಾಹ್ನ 2 ಗಂಟೆಯವರೆಗೆ ಎಸ್.ಎಸ್.ಎಲ್.ಸಿ, ಐಟಿಐ, ಪಿಯುಸಿ, ಡಿಪ್ಲೋಮಾ ಪುರುಷ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ “ನೇರ ಸಂದರ್ಶನ” ವನ್ನು ಬೆಳಗಾವಿಯ ಹೊನಗಾ ಜಿನಾಬಕೂಲ್ ಫೋರ್ಜ, ಪೈ.ಲಿ.ನಲ್ಲಿ ಆಯೋಜಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು https://tinyurl.com/ysb458p9 ಈ ವೆಬ್‌ಸೈಟನಲ್ಲಿ ಹೆಸರು ನೊಂದಾಯಿಸಿ ಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7899683036, 7975856566 ಗಳಿಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


