Belagavi NewsBelgaum NewsKannada NewsKarnataka NewsLatest
*ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಗೆ ಹಂಚಿಕೆ ಮಾಡಲಾಗಿರುವ 24 ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಹಾಗೂ ಪೌರಕಾರ್ಮಿಕರ ವಿಶೇಷ ನೇಮಕಾತಿ 2022 ಹಾಗೂ ಸಂಖ್ಯಾತಿರಿಕ್ತ ಪೌರಕಾರ್ಮಿಕರ ನೇಮಕಾತಿ 2023ರಲ್ಲಿ ಬಾಕಿ ಉಳಿದ ಪರಿಶಿಷ್ಠ ಪಂಗಡದ ಒಟ್ಟು 13 ಬ್ಯಾಕಲಾಗ್ ಹುದ್ದೆಗಳಿಗೆ ಪರಿಶಿಷ್ಠ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳನ್ನು ಮೇ.20 2026 ರಿಂದ ಜೂನ್ 19 2026 ರವರೆಗೆ ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತ ಶಾಖೆಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 19 2026 ರ ಸಂಜೆ 5:30 ಘಂಟೆಯೊಳಗೆ ಈ ಕಛೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ಅಧಿಕೃತ ವೆಬ್ಸೈಟ್ www.belagavicity.mrc.gov.in ನಲ್ಲಿ ಪರಿಶೀಲಿಸಬಹುದಾಗಿರುತ್ತದೆ ಎಂದು ಮಹಾನಗರ ಪಾಲಿಕೆ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



