Belagavi NewsBelgaum NewsCrimeKannada NewsKarnataka News

*ಶೂಟೌಟ್ ಮಾಡಿಕೊಂಡು ಬೆಳಗಾವಿಯ ಖ್ಯಾತ ವೈದ್ಯ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹಿರಿಯ ವೈದ್ಯರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ  ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿ ನಗರದಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ನಡೆದಿದೆ.

ಡಾ. ದಿನೇಶ್ ಲಕ್ಷ್ಮಣ ಭಟ್ಕಳ (79) ಆತ್ಮಹತ್ಯೆ ಮಾಡಿಕೊಂಡ ವೈದ್ಯರು. ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾಗಿದ್ದು ಹಲವು ವರ್ಷಗಳಿಂದ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಡಾ. ಭಟ್ಕಳ ಅವರು ತಮ್ಮ ಮನೆಯ ಬಾಲ್ಕನಿಯಲ್ಲಿ ತಾವೇ ತಮ್ಮ ಮೇಲೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಿನ ಸದ್ದು ಕೇಳಿ ಮನೆಯವರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ಸ್ಥಳಕ್ಕೆ ಧಾವಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. 

ಅನಾರೋಗ್ಯ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಹಿನ್ನೆಲೆ ಈ ಕೃತ್ಯ ಎಸಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

Home add -Advt

ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತನಿಖೆಯ ನಂತರವೇ ಸ್ಪಷ್ಟವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಟಿಳಕವಾಡಿ ಠಾಣೆಯ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಮಾಜದಲ್ಲಿ ಸರಳ ಹಾಗೂ ಸ್ನೇಹಪರ ವ್ಯಕ್ತಿತ್ವದಿಂದ ಪರಿಚಿತರಾಗಿದ್ದ ಅವರು, ವೈದ್ಯ ವಲಯದಲ್ಲಿಯೂ ಗೌರವ ಪಡೆದಿದ್ದರು.

Related Articles

Back to top button