Belagavi NewsBelgaum NewsCrimeKannada NewsKarnataka News

*ಕಳೆದು ಹೋದ 24 ಮೋಬೈಲ್ ಪತ್ತೆ ಮಾಡಿದ ಅಥಣಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದು ಹೋದ ಮೊಬೈಲ್‌ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿ ವಾರಸುದಾರರಿಗೆ ಒಪ್ಪಿಸಲಾಗಿದೆ.

ಇತ್ತಿಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾದಂತೆ ಮೊಬೈಲ್ ಪೋನಗಳು ಕಳೆದು ಹೋಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಾರ್ವಜನಿಕರ ಆಸ್ತಿಯನ್ನು ರಕ್ಷಿಸಲು ಮತ್ತು ಕಳೆದು ಹೋದ ಮೊಬೈಲ್‌ಗಳನ್ನು ಪತ್ತೆ ಮಾಡಲು ಆತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸದರಿ ಕಳೆದು ಹೋದ ಮೊಬೈಲಗಳನ್ನು ಪತ್ತೆ ಮಾಡಲಾಗುತ್ತಿದೆ.

ಅಥಣಿ ಉಪ ವಿಭಾಗ ವ್ಯಾಪ್ತಿಯಲ್ಲಿ ಎರಡು ವರ್ಷಗಳಲ್ಲಿ ಕಳೆದುಹೋದ ಮೊಬೈಲ್ ಹಂತ ಹಂತವಾಗಿ ಪತ್ತೆ ಮಾಡಿ ಹಿಂದಿರುಗಿಸಲಾಗುತ್ತಿದೆ. ಉಳಿದ 24 ಮೊಬೈಲ್‌ಗಳನ್ನು ಪತ್ತೆ ಮಾಡಿ ಈ ದಿವಸ ಇಂದು ಮೊಬೈಲ್ ವಾರಸುದಾರರಿಗೆ ಹಿಂದುರುಗಿಸಲಾಗಿದೆ. ಇನ್ನೂಳಿದ ಮೊಬೈಲ್‌ಗಳನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರೆದಿದ್ದು ಇರುತ್ತದೆ.

Home add -Advt

Related Articles

Back to top button