Kannada NewsLatestWorld

*ಶ್ವೇತಭವನ ಸಂಕೀರ್ಣದ ಬಳಿ ಗುಂಡಿನ ದಾಳಿ: ಭದ್ರತಾ ಪಡೆಗಳ ಗುಂಡೇಟಿಗೆ ದಾಳಿಕೋರ ಬಲಿ*

ಪ್ರಗತಿವಾಹಿನಿ ಸುದ್ದಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂ ಅವರನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಯೊಬ್ಬ ಮತ್ತೆ ಗುಂಡಿನ ದಾಳಿ ನಡೆಸಿದ್ದಾನೆ. ಶ್ವೇತಭವನ ಸಂಕೀರ್ಣದ ಬಳಿ ಗುಂಡಿನ ದಾಳಿ ನಡೆದಿದ್ದು, ಪೆನ್ಸಿಲ್ವೇನಿಯಾ ಅವೆನ್ಯೂ NW ಬಳಿ ಫೈರಿಂಗ್​ ನಡೆದಿದೆ.

ಗುಂಡಿನ ದಾಳಿ ನಡೆದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲೇ ಇದ್ದರು ಎಂದು ತಿಳಿದುಬಂದಿದೆ. ಗುಂಡಿನ ದಾಳಿಗೆ ಜನರು, ವರದಿಗಾರರು ದಿಕ್ಕಾಪಾಲಾಗಿ ಓಡಿದ್ದಾರೆ. ಶ್ವೇತಭವನದ ಬಳಿ ದಾಳಿಕೋರ ಏಕಾಏಕಿ ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದದನೆ.

ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ. ಶಂಕಿತನಿಗೆ ಗುಂಡು ತಗುಲಿದೆ. ಬಳಿಕ ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಸೀಕ್ರೆಟ್ ಸರ್ವಿಸ್ ತಿಳಿಸಿದೆ. ಮೃತನನ್ನು 21 ವರ್ಷದ ನಸಿರೆ ಬೆಸ್ಟ್ ಎಂದು ಗುರುತಿಸಲಾಗಿದೆ. ಈತ ಮಾನಸಿಕ ಅಸ್ವಸ್ತನಾಗಿದ್ದ ಎಂದು ತಿಳಿದುಬಂದಿದೆ.ಘಟನೆಯಲ್ಲಿ ಓರ್ವ ಪಾದಚಾರಿಗೂ ಗಾಯಗಳಾಗಿವೆ.

Home add -Advt

Related Articles

Back to top button