Kannada NewsKarnataka NewsLatest

*ಭಟ್ಕಳ ಉದ್ವಿಗ್ನ: ಪೊಲೀಸರ ಮೇಲೆ ಹಲ್ಲೆ, ಲಾಠಿ ಚಾರ್ಜ್*

ಪ್ರಗತಿವಾಹಿನಿ ಸುದ್ದಿ: ಧಾರ್ಮಿಕ ಮೂರಿಕಟ್ಟೆ ಮರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಭಾರೀ ವಿವಾದ ಸೃಷ್ಟಿಯಾಗಿದ್ದು, ಮುಸ್ಲಿಂ ಸಂಘಟನೆಯೊಂದರ ಪ್ರಮುಖರು ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಉದ್ವಿಗ್ನ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಭಾನುವಾರ ರಾತ್ರಿ ನಡೆದಿದೆ. 

ಭಟ್ಕಳದ ಜಾಗಟೆ ಕಟ್ಟೆ ಎಂಬಲ್ಲಿದ್ದ ಐತಿಹಾಸಿಕ ಮೂರಿಕಟ್ಟೆಯನ್ನು ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಂದರ್ಭದಲ್ಲಿ ತೆರವುಗೊಳಿಸಲಾಗಿತ್ತು. ಇತ್ತೀಚೆಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಸುಪರ್ದಿಗೆ ಒಳಪಡುವ ಅದೇ ಜಾಗದಲ್ಲಿ ಮುಂಜಾನೆ ಮೂರಿಕಟ್ಟೆಯನ್ನು ಮರು ನಿರ್ಮಾಣ ಮಾಡಿದ್ದರು. 

ಆದರೆ, ಈ ನಿರ್ಮಾಣಕ್ಕೆ ಸ್ಥಳೀಯ ಮುಸ್ಲಿಂ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು ಹಾಗೂ ಕಟ್ಟೆಯನ್ನು ತಕ್ಷಣವೇ ತೆರವುಗೊಳಿಸುವಂತೆ ಪಟ್ಟು ಹಿಡಿದಿದ್ದರು. ಜಾಗಟೆ ಕಟ್ಟೆ ಬಳಿ ಏಕಾಏಕಿ ಜಮಾಯಿಸಿದ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರ ಗುಂಪು, ಬೆಳಿಗ್ಗೆ ನಿರ್ಮಿಸಲಾಗಿದ್ದ ಮೂರಿಕಟ್ಟೆಯನ್ನು ಒಡೆದು ಹಾಕಿದ್ದಾರೆ. 

ಈ ವೇಳೆ ಸೃಷ್ಟಿಯಾಗಿದ್ದ ಗೊಂದಲದ ವಾತಾವರಣವನ್ನು ನಿಯಂತ್ರಿಸಲು ಮುಂದಾದ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಕೆಲವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Home add -Advt

ಮೂರಿಕಟ್ಟೆ ಒಡೆದಿರುವ ಘಟನೆಗೆ ಹಿಂದೂಪರ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಈ ಘಟನೆವನ್ನು ಸುಮ್ಮನೆ ಬಿಡುವುದಿಲ್ಲ. ತಕ್ಕ ಪಾಠ ಕಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

Related Articles

Back to top button