
ಪ್ರಗತಿವಾಹಿನಿ ಸುದ್ದಿ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೊಬ್ಬ ಅಟ್ಟಹಾಸ ಮೆರೆದಿದ್ದು,ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.
ಧಾರವಾಡದ ಬಡಾವಣೆಯೊಂದರಲ್ಲಿ ಈ ಘಟನೆ ನಡೆಸಿದೆ. 9ನೇ ತರಗತಿಯಲ್ಲಿ ಓದುತ್ತಿದ್ದ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿಯನ್ನು ಖಾಜಾಸಾಬ್ ಪಠಾಣ್ ಎಂದು ಗುರುತಿಸಲಾಗಿದ್ದು, ವಿದ್ಯಾಗಿರಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ
ಬಾಲಕಿಯನ್ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ ಖಾಜಾಸಾಬ್, ಆಕೆಯನ್ನ ಪ್ರೀತಿಸುವುದಾಗಿ ಹೇಳಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಈ ವೇಳೆ ಸ್ಥಳೀಯರು ಖಾಜಾಸಾಬ್ನನ್ನ ಹಿಡಿದು ವಿಚಾರಿಸಿದ್ದಾರೆ. ಆತನ ಮೊಬೈಲ್ ಪರಿಶೀಲಿಸಿದಾಗ, ಮೊಬೈಲ್ನಲ್ಲಿ ಬಾಲಕಿ ಜೊತೆಗಿನ ಕೆಲ ಖಾಸಗಿ ಫೋಟೋಗಳು ಪತ್ತೆಯಾಗಿದೆ.
ಸದ್ಯ ಆರೋಪಿ ಖಾಜಾಸಾಬ್ ನನ್ನು ಬಂಧಿಸಲಾಗಿದ್ದು, ಪೋಕ್ಸೋ ಪ್ರಕರಣ ದಾಖಲಾಗಿದೆ.



