Belagavi NewsBelgaum NewsKannada NewsKarnataka NewsLatestNationalTravel

*ಬೆಳಗಾವಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.

ಮಹಾಂತೇಶ್, ಸಾಕ್ಷಿ ಹಾಗೂ ಅವರ ಮಗು ಮೃತ ದುರ್ದೈವಿಗಳು. ರಾಯಬಾಗ ರೈಲ್ವೆ ಸ್ಟೇಷನ್ ಸಮೀಪ ಬೈಕ್ ನಲ್ಲಿ ಸಾಗುತ್ತಿದ್ದಾಗ ಆಟೋಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ಬೈಕ್ ಸವಾರ ಮಹಾಂತೇಶ್, ಅವರ ಪತ್ನಿ ಸಾಕ್ಷಿ ಹಾಗೂ 9 ತಿಂಗಳ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಯಭಾಗ ಠಾಣೆಯ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. 

ಕುಟುಂಬಸ್ಥರ ರೋಧನ ಮುಗಿಲು ಮುಟ್ಟುವಂತಿದ್ದು, ನೋಡುಗರ ಎದೆಕರಗಿಸುವ ವಾತಾವರಣ ಸೃಷ್ಟಿಯಾಗಿತ್ತು. ರಾಯಭಾಗ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button