Belagavi NewsBelgaum NewsKarnataka NewsLatestPolitics
*ಬೆಳಗಾವಿಗೆ ಆಗಮಿಸಿದ ಬಿ.ಎಲ್.ಸಂತೋಷ್: ಆತ್ಮೀಯವಾಗಿ ಬರಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಕಾರ್ಯಕ್ರಮಕ್ಕೆ ಬೆಳಗಾವಿಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಖಾಸಗಿ ಹೋಟೆಲ್ ನಲ್ಲಿ ಬರಮಾಡಿಕೊಂಡರು.
ಬಿಜೆಪಿ ಮುಖಂಡರ ಜೊತೆ ಬೆಳಗಿನ ಉಪಹಾರ ಸೇವಿಸಿದ ಬಿ.ಎಲ್.ಸಂತೋಷ್ ಕೆಲ ಕಾಲ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. ಈ ವೇಳೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ್ ಪಾಟೀಲ್, ಮಾಜಿ ಶಾಸಕ ಅನಿಲ್ ಬೆನಕೆ, ಜಗದೀಶ್ ಮೆಟಗುಡ್ಡ, ಮಹಾಂತೇಶ್ ಕವಟಗಿಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.



