*ವಾಟಾಳ್ ನಾಗರಾಜ್ ಸೇರಿದಂತೆ ಹಲವು ಕನ್ನಡಪರ ಹೋರಾಟಗಾರರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕದ ಪರ ನಿರ್ಣಯಕ್ಕೆ ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಬೆಳಗಾವಿ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ವಾಟಳ್ ನಾಗರಾಜ ಸೇರಿದಂತೆ ನೂರಕ್ಕೂ ಅಧಿಕ ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿಯಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಕಚೇರಿಯಿಂದ ಮಹಾನಗರ ಪಾಲಿಕೆ ವರೆಗೆ ಸ ರಾ ಗೋವಿಂದ, ಕನ್ನಡ ಕುಮಾರ್, ಅಶೋಕ ಚಂದರಗಿ ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗಿ ಆಗಿದ್ರು.
ಪಾಲಿಕೆಯಲ್ಲಿ 2004ರಲ್ಲಿ ಮಹಾರಾಷ್ಟ್ರ ಪರ ನಿರ್ಣಯವಾಗಿದೆ. ಸದ್ಯ ಪಾಲಿಕೆಯಲ್ಲಿ ಕನ್ನಡಿಗರೇ ಮೇಯರ್, ಉಪಮೇಯರ್ ಇದ್ದಾರೆ. ಕರ್ನಾಟಕದ ಪರ ನಿರ್ಣಯಕ್ಕೆ ಹಲವು ಸಲ ಬೇಡಿಕೆ ಇಡಲಾಗಿದೆ. ಬೇಡಿಕೆ ಮಣಿಯದ ಹಿನ್ನೆಲೆಯಲ್ಲಿ ಕನ್ನಡ ಪರ ಹೋರಾಟಗಾರರಿಂದ ಪಾಲಿಕೆಗೆ ಮುತ್ತಿಗೆ ಯತ್ನ ನಡೆದಿದೆ. ಕನ್ನಡ ಪರ ಹೋರಾಗಾರರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಿದ್ದಂತೆ ಆರ್ ಟಿ ಓ ವೃತ್ತದ ಬಳಿ ಹೋರಾಟಗಾರರು ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸಲಾಯಿತು. ಕೊನೆಗೆ ಹಲವು ಹೋರಾಟಗಾರನ್ನು ಪೊಲೀಸರು ವಶಕ್ಕೆ ಪಡೆದರು.


