Kannada NewsNationalPolitics

*ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಮೇಲೆ ಇಡಿ ದಾಳಿ*

ಪ್ರಗತಿವಾಹಿನಿ ಸುದ್ದಿ: ಸಿಎಂಆರ್‌ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ಕೇರಳದ ವಿವಿಧೆಡೆ ದಾಳಿ ನಡೆಸಿದೆ.

ಕೇರಳದ ಪ್ರಮುಖ ರಾಜಕೀಯ ನಾಯಕ ಮತ್ತು ಸಿಪಿಐ(ಎಂ) ಹಿರಿಯ ಮುಖಂಡರಾಗಿರುವ ಪಿಣರಾಯಿ ವಿಜಯನ್ ಅವರ ನಿವಾಸದ ಮೇಲೆ ಇಡಿ ದಾಳಿ ನಡೆದಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತಿರುವನಂತಪುರದಲ್ಲಿರುವ ಪಿಣರಾಯಿ ವಿಜಯನ್ ಅವರ ಬಾಡಿಗೆ ನಿವಾಸವೂ ಸೇರಿದಂತೆ ಕೇರಳದ ಒಟ್ಟು 10 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣವು ಸಿಎಂಆರ್‌ಎಲ್ ಸಂಸ್ಥೆಯಿಂದ ಪಿಣರಾಯಿ ವಿಜಯನ್ ಅವರ ಪುತ್ರಿ ಟಿ ವೀಣಾ ಮಾಲೀಕತ್ವದ ಎಕ್ಸಾಲಾಜಿಕ್ ಸೊಲ್ಯೂಷನ್ಸ್ ಕಂಪನಿಗೆ ನೀಡಲಾಗಿದೆ ಎನ್ನಲಾದ ₹1.72 ಕೋಟಿ ಪಾವತಿಗೆ ಸಂಬಂಧಿಸಿದ್ದಾಗಿದೆ.

Home add -Advt

2018ರಿಂದ 2019ರ ಅವಧಿಯಲ್ಲಿ ಯಾವುದೇ ಸೇವೆ ಒದಗಿಸದಿದ್ದರೂ ಸಿಎಂಆರ್‌ಎಲ್ ಸಂಸ್ಥೆ ಎಕ್ಸಾಲಾಜಿಕ್ ಸೊಲ್ಯೂಷನ್ಸ್‌ಗೆ ಅಕ್ರಮವಾಗಿ ರೂ.1.72 ಕೋಟಿ ಪಾವತಿಸಿದೆ ಎಂಬ ಆರೋಪ ಕೇಳಿಬಂದಿದೆ. ಇದೇ ಆರೋಪಗಳ ಆಧಾರದ ಮೇಲೆ ಇಡಿ ತನಿಖೆ ಆರಂಭಿಸಿತ್ತು.

Related Articles

Back to top button