Belagavi NewsBelgaum NewsKannada NewsKarnataka News

*ರಾಜ್ಯದಲ್ಲಿ ಮುಂದಿನ ಮೂರು ದಿನ ಸುಂಟರ ಗಾಳಿ ಹಾಗೂ ಭಾರಿ ಮಳೆ ಸೂಚನೆ*

ಪ್ರಗತಿವಾಹಿನಿ ಸುದ್ದಿ : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮ ಸುಳಿಗಾಳಿಯ ತೀವ್ರತೆಯಿಂದಾಗಿ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಎಲ್ಲಡೆ ಜೋರಾಗಿದೆ.

ಮುಂದಿನ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಗುಡುಗು, ಮಿಂಚು ಹಾಗೂ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಬಲವಾದ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮೇ 29ಕ್ಕೆ ವರೆಗೂ ಮಳೆ ಅಬ್ಬರ ಇರಲಿದೆ ಎಂದು ಗೊತ್ತಾಗಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ತುಮಕೂರು, ಕೋಲಾರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಹಾವೇರಿ, ಗದಗ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮೇ 28 ರಂದು ಕಲಬುರಗಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button