Kannada NewsLatestNationalPolitics

*ದೆಹಲಿಯಲ್ಲಿಯೇ ಬೀಡುಬಿಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್: ಕುತೂಹಲ ಮೂಡಿಸಿದ ನಡೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಮುಂದಾಗಿದ್ದು, ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ. ಈ ಬೆಳವಣಿಗೆ ನಡುವೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲೇ ಉಳಿದುಕೊಂಡಿದ್ದಾರೆ.

ಮಂಗಳವಾರ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ನಡೆಸಿದ ಮ್ಯಾರಥಾನ್ ಸಭೆ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮ್ಯಯ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೊದಲಿನಿಂದಲೂ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರಿವ ಡಿಸಿಎಂ ಡಿ.,ಕೆ.ಶಿವಕುಮಾರ್ ಸಿದ್ದರಾಮಯ್ಯ ಬಳಿಕ ಮುಖ್ಯಮಂತ್ರಿಯಾಗಲಿದ್ದಾರಾ? ಎಂಬುದು ಇನ್ನಷ್ಟೇ ಖಚಿತವಾಗಬೇಕಿದೆ.

ಸಿಎಂ ಸ್ಥಾನಕ್ಕೆಸಿದ್ದರಾಮಯ್ಯ ರಾಜೀನಾಮೆ ಹಾಗೂ ಮುಂದಿನ ಸಿಎಂ ಆಯ್ಕೆ ಬಗ್ಗೆ ಸ್ಪಷ್ಟನೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿಯೇ ಬೀಡು ಬಿಟ್ಟಿದ್ದು, ಇಂದು ಮತ್ತೊಮ್ಮೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

Home add -Advt

ನಾಳೆ ಬೆಳಿಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಡಿ.ಕೆ.ಶಿವಕುಮಾರ್, ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಕರೆದಿರುವ ಉಪಹಾರ ಕೂಟದಲ್ಲಿ ಭಾಗಿಯಾಗಲಿದ್ದಾರೆ.

Related Articles

Back to top button