Kannada NewsKarnataka NewsLatest

*18 ದಿನಗಳ ಹಿಂದೆ ಮದುವೆಯಾಗಿದ್ದ ಕಾನ್ಸ್ ಟೇಬಲ್ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: 18 ದಿನಗಳ ಹಿಂದೆ ಮದುವೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಕರ್ತವ್ಯನಿರತರಾಗಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿವಮೊಗ್ಗದಲ್ಲಿ ಈ ದುರಂತ ಸಂಭವಿಸಿದೆ. ಈರಣ್ಣ ಗುಡಾದಾರ್ (26) ಮೃತ ದುರ್ದೈವಿ. ಮೂಲತಃ ಬೆಳಗಾವಿಯ ಗೋಕಾಕ್ ತಾಲೂಕಿನವರಾದ ಈರಣ್ಣ ಗುಡಾದಾರ್ ಕಳೆದ 7 ವರ್ಷದಿಂದ ಕೆಎಸ್‌ಆರ್‌ಪಿ 8ನೇ ಪಡೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕೆಲ ಮಾಡುತ್ತಿದ್ದರು.

ಈರಣ್ಣ ಗುಡಾದಾರ್ 18 ದಿನಗಳ ಹಿಂದೆಯಷ್ಟೇ ಅದ್ದೂರಿಯಾಗಿ ವಿವಾಹವಾಗಿದ್ದರು. ಕರ್ತವ್ಯದಲ್ಲಿದ್ದಾಗಲೇ ಏಕಾಏಕಿ ಕುಸಿದು ಬಿದ್ದ ಈರಣ್ಣ ಅವರನ್ನು ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

Home add -Advt

Related Articles

Back to top button