Kannada NewsKarnataka NewsNationalPolitics

*ಧೀಡಿರ್ ಮುಂಬೈಗೆ ತೆರಳಿದ ರಾಜ್ಯಪಾಲರು: ಸಿದ್ದರಾಮಯ್ಯ ಭೇಟಿ ಡೌಟ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ ಸಿದ್ದರಾಮಯ್ಯ ಅವರು ಇಂದು ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿದ್ದರು. ಈ ಮದ್ಯೆ ರಾಜ್ಯಪಾಲರು ಮುಂಬೈ ಪ್ರಯಾಣ ಬೆಳೆಸಿದ್ದು, ತೀವ್ರ ಚರ್ಚಗೆ ಕಾರಣವಾಗಿದೆ.

ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಬುಧವಾರ ತಡರಾತ್ರಿ 11:45 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ. 

ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ ಸಿದ್ದರಾಮಯ್ಯ ಅವರು ಇಂದು ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿದ್ದರು. ಇದಕ್ಕೆ ಸ್ಪಂದಿಸಿದ್ದ ಲೋಕಭವನ ಗುರುವಾರ ಬೆಳಗ್ಗೆ 11:30 ಕ್ಕೆ ಹಾಗೂ ಮಧ್ಯಾಹ್ನ 3 ಗಂಟೆಯ ನಂತರ ಭೇಟಿಗೆ ಅವಕಾಶವನ್ನೂ ಕಲ್ಪಿಸಿತ್ತು.

ಸಿಎಂ ಭೇಟಿಗೆ ಕೆಲವೇ ಗಂಟೆಗಳು ಬಾಕಿ ಇರುವಾಗ ರಾಜ್ಯಪಾಲರು ಮಧ್ಯರಾತ್ರಿಯೇ ರಾಜಧಾನಿ ತೊರೆದಿರುವುದು ತೀವ್ರ ಕುತೂಹಲ ಮೂಡಿಸಿದೆ.

Home add -Advt

ರಾಜ್ಯಪಾಲರು ಇಂದೇ ಮುಂಬೈನಿಂದ ಮರಳಿ ಬರುತ್ತಾರಾ ಎನ್ನುವುದರ ಬಗ್ಗೆ ಖಚಿತತೆ ಇಲ್ಲ. ಒಂದು ವೇಳೆ ಮರಳಿ ಬಂದರೂ ಮಧ್ಯಾಹ್ನ 3 ಗಂಟೆಯ ನಂತರ ಸಿದ್ದರಾಮಯ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ.

Related Articles

Back to top button