Karnataka NewsLatestPolitics

*ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗೆ ತೆರೆ ಬಿದ್ದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ.

ಡಿ.ಕೆ.ಶಿವಕುಮಾರ್ ಹೆಸರು ಅಧಿಕೃತವಾಗಿ ಘೋಷಣೆಯಾಗಿಲ್ಲವಾದರೂ ಅವರೇ ನೂತನ ಸಿಎಂ ಎಂಬ ಮಾತು ಕೇಳಿಬರುತ್ತಿದೆ. ಈ ನಡುವೆ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನಕ್ಕೆ ಸಕಲ ಸಿದ್ಧತೆ ನಡೆಸಿದ್ದು, ಪ್ರಮಾಣವಚನಕ್ಕೆ ಮುಹೂರ್ತ ನೀಡುವಂತೆ ಜ್ಯೋತಿಷಿ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಅಲ್ಲಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಸಿಎಲ್​​ಪಿ ಸಭೆ, ಹೊಸ ಸಚಿವ ಸಂಪುಟ ಹಾಗೂ ಡಿಸಿಎಂ ಆಯ್ಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅದಕ್ಕೂ ಮೊದಲು ಡಿ.ಕೆ ಶಿವಕುಮಾರ್ ಅವರು ಜ್ಯೋತಿಷಿ ದ್ವಾರಕನಾಥ್ ಅವರಿಗೆ ದೂರವಾಣಿ ಕರೆ ಮಾಡಿ ಪ್ರಮಾಣವಚನಕ್ಕೆ ಒಳ್ಳೆ ಮುಹೂರ್ತ ನೋಡಿ ಎಂದು ಮನವಿ ಮಾಡಿದ್ದಾರೆ.

ಮೂರು ಬೇರೆ ಬೇರೆ ದಿನಾಂಕಗಳನ್ನು ನೀಡುವಂತೆ ಮನವಿ ಮಾಡಿದ್ದು, ಪ್ರಮಾಣವಚನಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬರುವ ಎಲ್ಲಾ ಸಾಧ್ಯತೆಗಳಿವೆ. ಆದರೆ, ಪ್ರಮಾಣವಚನ ಯಾವಾಗ ಏನು ಎನ್ನುವುದು ಇನ್ನೂ ತಿಳಿದುಬಂದಿಲ್ಲ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button