
ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾದ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ.

ದೆಹಲಿಯಲ್ಲಿ 10 ಜನಪಥ ರಸ್ತೆಯಲ್ಲಿರುವ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದರು. ಈ ವೇಳೆ ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ತಬ್ಬಿಕೊಂಡರು. ರಾಜೀನಾಮೆಗೆ ಸೂಚಿನೆ ನೀಡಿದ ತಕ್ಷಣ ಮರು ಮಾತನಾಡದೇ ರಾಜೀನಾಮೆ ನೀಡಿದ್ದಕ್ಕೆ ಅಭಿನಂದಿಸಿದರು.

ಬಳಿಕ, ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ ಹಾಗೂ ಯತೀಂದ್ರ ಸಿದ್ದರಾಮಯ್ಯ ಕೂಡ ಉಪಸ್ಥಿತರಿದ್ದರು.
ಇದೇ ವೇಳೆ ನೂತನ ಸಂಪುಟದಲ್ಲಿ ಪುತ್ರ ಯತೀಂದ್ರನಿಗೆ ಸ್ಥಾನ ನೀಡಬೇಕು ಎಂದು ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಮುಂದೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.




