Kannada NewsKarnataka NewsLatest

*ಇಂದು ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ 8 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಿದೆ.

ಮುಂಗಾರು ಪೂರ್ವ ಮಳೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಮೈಸೂರು, ರಾಮನಗರ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಗಾಳಿ ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕೆಲವು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಗದಗ, ಕೊಪ್ಪಳ, ಧಾರವಾಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button