
ಪ್ರಗತಿವಾಹಿನಿ ಸುದ್ದಿ: ಭೀಕರ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ. ಥಾರ್, ಆಟೋ, ಕ್ಯಾಂಟರ್ ನಡುವೆ ಅಪಘಾತವಾಗಿದ್ದು, ಆಟೋದಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.



