Karnataka NewsLatestPolitics

*ರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಜಾರಿ ಮಾಡಿರುವುದು ಸರಿಯಿಲ್ಲ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಗ್ಯಾರೆಂಟಿ ಯೋಜನೆಗಳ ಬಗ್ಗೆ ಯಾರಿಗೂ ವಿರೋಧವಿಲ್ಲ ರಾಜ್ಯದ ಹಣಕಾಸಿನ ವ್ಯವಸ್ಥೆ ದುಸ್ಥಿತಿಗೆ ತೆಗೆದುಕೊಂಡು ಹೋಗಿ ರಾಜಕೀಯ ಲಾಭಕ್ಕಾಗಿ ಜಾರಿ ಮಾಡಿರುವುದು ಸರಿಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರೆಂಟಿ ಯೋಜನೆಗಳನ್ನು ಕೇವಲ ರಾಜಕೀಯ ಲಾಭಕ್ಕಾಗಿ ಮಾಡಿರುವುದು ಎಷ್ಟು ಸರಿ. ಯಾವುದನ್ನೂ ಪೂರ್ವಭಾವಿಯಾಗಿ ಚಿಂತನೆ ಮಾಡದೇ ಜಾರಿ ಮಾಡಿರುವುದರಿಂದ ರ ರಾಜ್ಯ ಅನುಭವಿಸುತ್ತಿದೆ. ಶಾಲೆಗಳಲ್ಲಿ ಬೆಂಚ್ ಇಲ್ಲಾ, ಆಸ್ಪತ್ರೆಗಳಲ್ಲಿ ಔಷಧ ಇಲ್ಲ. ಮೆಡಿಕಲ್ ಕಾಲೇಜುಗಳಲ್ಲಿ ಮೂಲ ಸೌಕರ್ಯ ಇಲ್ಲ. ಶೀಕ್ಷಣ ವ್ಯವಸ್ಥೆ ಹದಗೆಟ್ಟಿದೆ. ಉದ್ಯೋಗ ಸೃಷ್ಟಿ ಕಡಿಮೆಯಾಗಿದೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜಿನಲ್ಲಿ ಮೂರು ವರ್ಷವಾದರೂ ಸರಿಯಾದ ಸೌಕರ್ಯ ಇಲ್ಲದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೂರು ವರ್ಷದಲ್ಲಿ ಮಾಡಬೇಕಿತ್ತು. ಯಾರಿದ್ದಾಗ ಏನು ಕೆಲಸ ಆಗಿತ್ತು ಅಂತ ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button