Election NewsKannada NewsKarnataka NewsLatest

*ವಿಧಾನಪರಿಷತ್ 7 ಸ್ಥಾನಗಳಿಗೆ ಚುನಾವಣೆ: ಅಧಿಸೂಚನೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ವಿಧಾನಪರಿಷತ್‌ನ 7 ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ಇಂದಿನಿಂದ ಜೂ.8ರವರೆಗೆ ನಾಮಪತ್ರ ಸಲ್ಲಿಸಬಹುದು.

ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಯ ಚುನಾವಣಾಧಿಕಾರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಕ್ಷಿ ಅವರು ಅಧಿಸೂಚನೆ ಪ್ರಕಟಿಸಿದ್ದಾರೆ. ಚುನಾವಣಾ ಸ್ಪರ್ಧೆಯಲ್ಲಿ 7ಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ ಜೂನ್ 18ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

ಜೂ.9 ರಂದು ನಾಮಪತ್ರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಂದು ಸಂಜೆ ವೇಳೆಗೆ ಸಿಂಧುವಾದ ನಾಮಪತ್ರಗಳ ಪ್ರಕಟಣೆ ಹೊರಡಿಸಲಾಗುತ್ತದೆ. ಜೂನ್ 11 ರವರೆಗೆ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಅವಕಾಶ ನೀಡಲಾಗಿದ್ದು, ಚುನಾವಣಾ ಸ್ಪರ್ಧೆಯಲ್ಲಿ 7ಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ ಜೂನ್ 18ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಇನ್ನು ಅಂದೆ ಸಂಜೆ 5 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ನಡೆಯಲಿದೆ.

Home add -Advt

ವಿಧಾನಪರಿಷತ್‌ ಸದಸ್ಯರಾದ ಗೋವಿಂದರಾಜು (ಕಾಂಗ್ರೆಸ್), ನಾಸಿರ್‌ ಅಹಮದ್‌ (ಕಾಂಗ್ರೆಸ್), ಎಂಟಿಬಿ ನಾಗರಾಜ್‌ (ಬಿಜೆಪಿ), ಪ್ರತಾಪ್‌ ಸಿಂಹ ನಾಯಕ್‌ ಕೆ(ಬಿಜೆಪಿ)., ತಿಪ್ಪಣ್ಣಪ್ಪ (ಕಾಂಗ್ರೆಸ್), ಸುನೀಲ್‌ ವಲ್ಯಾಪುರೆ (ಬಿಜೆಪಿ), ಬಿ.ಕೆ.ಹರಿಪ್ರಸಾದ್‌ (ಕಾಂಗ್ರೆಸ್) ಅವರ ಅವಧಿ ಜೂ. 30 ರಂದು ಮುಕ್ತಾಯಗೊಳ್ಳಲಿದೆ. ಇವರ ನಿವೃತ್ತಿಯಿಂದ ತೆರವಾಗುವ ಮೇಲ್ಮನೆ ಸದಸ್ಯ ಸ್ಥಾನಕ್ಕೆ ಭಾರತೀಯ ಚುನಾವಣಾ ಆಯೋಗವು ಪ್ರಕಟಣೆ ಹೊರಡಿಸಿದ್ದು, ಅದರಂತೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ.

Related Articles

Back to top button