Kannada NewsKarnataka NewsPolitics

*ದೆಹಲಿಯಿಂದ ವಾಪಸ್ ಆದ ಡಿಕೆಶಿ ಹಾಗೂ ಸಿದ್ದರಾಮಯ್ಯ: ಸಚಿವರ ಪಟ್ಟಿ ಫೈನಲ್ ಗೆ ಸಿದ್ಧತೆ*

ಪ್ರಗತಿವಾಹಿನಿ ಸುದ್ದಿ : ಕ್ಯಾಬಿನೆಟ್ ಸಚಿವರ ಪಟ್ಟಿಯನ್ನು ಅಂತಿಮಗೊಳಿಸುವ ಸಲುವಾಗಿ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ವಾಪಸಾಗಿದ್ದಾರೆ.

ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರ ಸಭೆ ನಡೆಯಲಿದ್ದು, ಸಚಿವರ ಪಟ್ಟಿ ಅಂತಿಮಗೊಂಡು ನಾಳೆ ಡಿಕೆ ಶಿವಕುಮಾರ್ ಸಿಎಂ ಆಗಿ ಸಚಿವರೊಡನೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

ಲಿಂಗಾಯಿತ, ದಲಿತ, ಅಲ್ಪಸಂಖ್ಯಾತ ಹಾಗೂ ಒಕ್ಕಲಿಗ ಸಮುದಾಯಗಳನ್ನು ಗಮನದಲ್ಲಿರಿಸಿಕೊಂಡು ನಾಳೆ ಪ್ರಮುಖ ಖಾತೆಗಳನ್ನು ಹಂಚುವ ನಿರೀಕ್ಷೆಯಿದೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಸಿದ್ದರಾಮಯ್ಯ ಸಂಪುಟದಲ್ಲಿ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ಕೊಡಬೇಕೆಂದು ಷರತ್ತು ವಿಧಿಸಿದ್ದರು. 

ಇದೇ ಕಾರ್ಯದ ಸಲುವಾಗಿ ಹೈಕಮ್ಯಾಂಡ್ ನಾಯಕರನ್ನೂ ಸಹ ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಭಾನುವಾರವೇ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಹೈಕಮ್ಯಾಂಡ್ ನಾಯಕರನ್ನು ಭೇಟಿಯಾಗಿ ತಮ್ಮತಮ್ಮ ಬಣಗಳ ಸಚಿವಾಕಾಂಕ್ಷಿಗಳ ಪಟ್ಟಿ ಸಲ್ಲಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button