Kannada NewsKarnataka NewsLatest
*ಹಾಡಹಗಲೇ ರಾಜ್ಯದಲ್ಲಿ ಮತ್ತೊಂದು ದರೋಡೆ: ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಚಿನ್ನಾಭರಣ ಕದ್ದು ಪರಾರಿಯಾದ ಕಳ್ಳರು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ನಡೆದಿದೆ. ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತ್ರಾ ಜಿಲ್ಲೆಯ ನೆಲಮಂಗಲದ ಟಿ.ಬೇಗೂರು ಸಮೀಪ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಶಸ್ತ್ರಾಸ್ತ್ರಗಳನ್ನು ತೋರಿಸಿ ಅಲ್ಲಿದ್ದ ಸಿಬ್ಬಂದಿಗಳಿಗೆ ಬೆದರಿಕೆ ಹಾಕಿ ಚಿನ್ನಾಭರಣ ಲೂಟಿ ಮಾಡಿದ್ದಾರೆ.
ಬೈಕ್ ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದೆ. ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಬಂದು ಬಳಿಕ ಮಾರಕಾಸ್ತ್ರಗಖನ್ನು ತೋರಿಸಿ ಚಿನ್ನಾಭರಣ ದರೋಡೆ ಮಾಡಿ ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಖದೀಮರ ಪತ್ತೆಗೆ ಬಲೆ ಬೀಸಿದ್ದಾರೆ.



