Belagavi NewsBelgaum NewsKannada NewsKarnataka NewsLatest

*ಜೂನ್ 6 ರಂದು ಬೆಳಗಾವಿ ಜಿಲ್ಲೆಯಲ್ಲಿ ಉದ್ಯೋಗ ಮೇಳ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಜೂನ್ 6 ರಂದು ಬೆಳಗ್ಗೆ 9.30 ರಿಂದ ಮದ್ಯಾಹ್ನ 2 ಗಂಟೆಯವರೆಗೆ, ಎಸ್‌ಎಸ್ಎಲ್ ಸಿ, ಐಟಿಐ, ಪಿಯುಸಿ, ಡಿಪ್ಲೋಮಾ, ಪದವಿ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ “ಉದ್ಯೋಗಮೇಳ” ವನ್ನು ಸವದತ್ತಿ ತಾಲೂಕಿನ ಶ್ರೀ ಕುಮಾರೇಶ್ವರ ವಿದ್ಯಾಮಂದಿರ ಶಿಂದೋಗಿ ಮುನವಳ್ಳಿ. ಇಲ್ಲಿ ಆಯೋಜಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು https://tinyurl.com/5ctae3uj ವೆಬ್‌ಸೈಟ್‌ನಲ್ಲಿ ಹೆಸರು ನೊಂದಾಯಿಸಿಕೊಳ್ಳ ಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 7899683036,7975856566 ಗಳನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಾಯಕ ನಿರ್ದೇಶಕರು, ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Home add -Advt

Related Articles

Back to top button