Karnataka NewsLatestPolitics

*ಪ್ರಮಾಣವಚನಕ್ಕೂ ಮುನ್ನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಆಶಿರ್ವಾದ ಪಡೆದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಡಿ.ಕೆ.ಶಿವಕುಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಇನ್ಬ್ನೇನು ಕೆಲವೇ ಸಮಯ ಬಾಕಿ ಇದೆ. ಪ್ರಮಾಣವಚನಕ್ಕೂ ಮುನ್ನ ಡಿ.ಕೆ.ಶಿವಕುಮಾರ್ ಖುದ್ದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಆಶಿರ್ವಾದ ಪಡೆದರು.

ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿದ ಡಿ.ಕೆ.ಶಿವಕುಮಾರ್, ಅವರ ಆಶಿರ್ವಾದ ಪಡೆದು ಶಾಲು ಹೊದಿಸಿ ಸನ್ಮಾನಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರುವಂತೆ ಆಹ್ವಾನಿಸಿದರು.

ಈ ವೇಳೆ ಹೆಚ್.ಡಿ.ದೇವೇಗೌಡರು. ಡಿ.ಕೆ.ಶಿವಕುಮಾರ್ ಅವರಿಗೆ ಶುಭಕೋರಿದರು. ಸುಮಾರು 20 ನಿಮಿಷಗಳ ಕಾಲ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ದೇವೇಗೌಡರ ಜೊತೆ ಮಾತುಕತೆ ನಡೆಸಿದರು. ನೂತನ ಸರ್ಕಾರಕ್ಕೆ ನಿಮ್ಮ ಸಹಕಾರ ಹಾಗೂ ಮಾರ್ಗದರ್ಶನ ಇರಲಿ ಎಂದು ಹೇಳಿದರು.

ಈ ವೇಳೆ ದೇವೇಗೌಡರು, ಖಂಡಿತ ನಮ್ಮ ಸಹಕಾರ ಸರ್ಕಾರಕ್ಕೆ ಯಾವತ್ತು ಇರುತ್ತದೆ. ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.

Home add -Advt


Related Articles

Back to top button