
ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತೊಮ್ಮೆ ಆಯ್ಕೆಯಾಗಲು ಬಯಸಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯದರ್ಶಿ, ಚುನಾವಣಾ ಅಧಿಕಾರಿಯಾಗಿರುವ ವಿಶಾಲಾಕ್ಷಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಕರ್ನಾಟಕದ 4 ಸ್ಥಾನ ಸೇರಿ 24 ಸ್ಥಾನಗಳಿಗೆ ಜೂನ್ 18ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

