Kannada NewsKarnataka NewsLatest

*ಮುಂಗಾರು ಪ್ರವೇಶ: ಗುಡುಗು ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮುಂಗಾರು ಮಳೆ ಎಂಟ್ರಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಸೂಚಿಸಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ಇರುವುದರಿಂದ ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

Home add -Advt

ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗಲಿದ್ದು, ಇಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಕೊಡಗು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Related Articles

Back to top button