Belagavi NewsBelgaum NewsKannada NewsKarnataka News
*ಧಾರಾಕಾರ ಮಳೆ: ಹುಟ್ಟುಹಬ್ಬದ ಪಾರ್ಟಿ ವೇಳೆಯೇ ಕುಸಿದು ಬಿದ್ದ ಕಟ್ಟಡ: ಕೂದಲೆಳೆ ಅಂತರದಲ್ಲಿ ಪಾರಾದ ಯುವಕರು*

ಪ್ರಗತಿವಾಹಿನಿ ಸುದ್ದಿ: ಧಾರಾಕಾರ ಮಳೆಗೆ ಹಳೆಯ ಕಟ್ಟಡವೊಂದು ಏಕಾಏಕಿ ಕುಸಿದು ಬಿದ್ದಿದ್ದು, 15 ಯುವಕರು ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಈ ಅವಘಡ ಸಂಭವಿಸಿದೆ. ಘಟನೆ ವೇಳೆ ಯುವಕರು ಸ್ನೇಹಿತನ ಬರ್ತ್ ಡೇ ಪಾರ್ಟಿ ಆಚರಿಸುತ್ತಿದ್ದರು. ಅಥಣಿ ಪಟ್ಟಣದ ಹಳದಿ ಕಟ್ಟಡವೊಂದರಲ್ಲಿ ಯುವಕರ ತಂಡವೊಂದು ತಮ್ಮ ಸ್ನೇಹಿತನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿತ್ತು. ಈ ವೇಳೆ ಕಟ್ಟಡದಿಂದ ವಿಚಿತ್ರವಾದ ಶಬ್ದ ಕೇಳಿಬಂದಿದೆ. ಅಪಾಯದ ಮುನ್ಸೂಚನೆ ಅರಿತ ಯುವಕರು ತಕ್ಷಣವೇ ಕಟ್ಟಡದಿಂದ ಹೊರಗೆ ಓಡಿ ಬಂದಿದ್ದಾರೆ.
ಯುವಕರು ಹೊರಬರುತ್ತಿದ್ದಂತೆ ಇಡೀ ಕಟ್ಟಡ ಕುಸಿದು ಬಿದ್ದಿದೆ. ಯುವಕರ ಸಮಯಪ್ರಜ್ಞೆಯಿಂದಾಗಿ ಭಾರಿ ದುರಂತವೊಂದು ತಪ್ಪಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




