
ಪ್ರಗತಿವಾಹಿನಿ ಸುದ್ದಿ: 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ.
ರಾಜ್ಯದ ಅತ್ಯಂತ ಪೈಪೋಟಿಯುಕ್ತ ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್ ಹಾಗೂ ವೆಟರ್ನರಿ (ಪಶುಸಂಗೋಪನೆ) ವಿಭಾಗದ ಟಾಪರ್‌ಗಳ ಪಟ್ಟಿಯನ್ನು ಸಹ ಪ್ರಕಟಿಸಲಾಗಿದ್ದು, ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.
ಇಂಜಿನಿಯರಿಂಗ್ ವಿಭಾಗದ ಫಲಿತಾಂಶದಲ್ಲಿ ಬೆಂಗಳೂರಿನ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಬೆಂಗಳೂರಿನ ಜಯನಗರದಲ್ಲಿರುವ ಪ್ರತಿಷ್ಠಿತ ಆರ್.ವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ತನಿಷಾ ಕಾರ್ತಿಕ್ ಅವರು ಇಂಜಿನಿಯರಿಂಗ್ ವಿಭಾಗದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನುಳಿದಂತೆ ಇದೇ ವಿಭಾಗದಲ್ಲಿ ಸೃಜನ್ ದ್ವಿತೀಯ ಸ್ಥಾನ ಪಡೆದರೆ, ನಿನಾದ್ ವಿಶಿಷ್ಟ ತೃತೀಯ ಸ್ಥಾನವನ್ನು ಪದೆದಿದ್ದಾರೆ.
ಪಶುಸಂಗೋಪನೆಅಥವಾ ವೆಟರ್ನರಿ ವಿಭಾಗದಲ್ಲಿ ಬೆಂಗಳೂರಿನ ಶಿವನಗರದ ಪಿಯು ಕಾಲೇಜಿನ ವಿದ್ಯಾರ್ಥಿನಿ ನಯನ ಗೋಪಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ವಿಭಾಗದಲ್ಲಿ ದ್ವಿತೀಯ ರ‍್ಯಾಂಕ್ ಅನ್ನು ದಾವಣಗೆರೆಯ ಸರ್ ಎಂ.ವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಪಡೆದುಕೊಂಡರೆ, ಆರ್.ವಿ ಪಿಯು ಕಾಲೇಜಿನ ರಿತಿಕ್ ಕುಮಾರ್ ಅವರು ತೃತೀಯ ರ‍್ಯಾಂಕ್ ಪಡೆದಿದ್ದಾರೆ.
ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗಳಾದ https://cetonline.karnataka.gov.in/kea/ ಅಥವಾ karresults.nic.in ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.



