CrimeKannada NewsKarnataka NewsLatest

*BREAKING: ತಂದೆ-ತಾಯಿ ಹಾಗೂ ಅಕ್ಕನಿಗೆ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ: ತಂದೆ ಹಾಗೂ ಸಹೋದರಿ ಸಾವು*

ಪ್ರಗತಿವಾಹಿನಿ ಸುದ್ದಿ: ಯುವಕನೊಬ್ಬ ತಂದೆ-ತಾಯಿ ಹಾಗೂ ಅಕ್ಕನಿಗೆ ಚಾಕುವಿನಿಂದ ಇರಿದು ಬಳಿಕ ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚಾಕು ಇರಿತಕ್ಕೆ ತಂದೆ ಹಾಗೂ ಅಕ್ಕ ಮೃತಪಟ್ಟಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸ ಅಯೋಧ್ಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಂದೆ, ತಾಯಿ ಹಾಗೂ ಅಕ್ಕನ ಮೇಲೆ ದಾಳಿ ನಡೆಸಿರುವ ಯುವಕ ಬಳಿಕ ತಾನೂ ಚಾಕು ಇರಿದುಕೊಂಡಿದ್ದಾನೆ. ಗಂಭೀರವಾಗಿ ಹಲ್ಲೆಗೊಳಗಾದ ತಂದೆ ಹಾಗೂ ಅಕ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಯಿ ಹಾಗೂ ಚಾರು ಇರಿದ ಗಾಯಾಳು ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಂದೆ ವೆಂಕಟನಾಯ್ಡು (೪೫), ಅಕ್ಕ ಪ್ರಗತಿ (೧೯) ಕೊಲೆಯಾದ ದುರ್ದೈವಿಗಳು. ಸಾಯಿಮಣಿ ಚಾಕುವಿನಿಂದ ಇರಿದುಕೊಂದ ಆರೋಪಿ. ಗಂಭೀರವಾಗಿ ಗಾಯಗೊಂಡಿರುವ ತಾಯಿ ಸೌಜನ್ಯ ಹಾಗೂ ಅರೋಪಿಯನ್ನು ಬಳ್ಳಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡು ಕುಟುಂಬದವರ ಮೇಲೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಗಂಗಾವತಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button