Kannada NewsKarnataka NewsPolitics

*ಗ್ಯಾರೆಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಸೂರಜ್ ಹೆಗ್ಡೆ ನಿಧನ*

ಪ್ರಗತಿವಾಹಿನಿ ಸುದ್ದಿ : ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಭಾನುವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

50 ವರ್ಷ ವಯಸಿನ ಅವರು ಪತ್ನಿ ಹಾಗೂ ಮಕ್ಕಳನ್ನು ತೊರೆದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತವಲಯದಲ್ಲಿ ಗುರುಸಿಕೊಂಡಿದ್ದ ಅವರ ಅಗಲಿಕೆಗೆ ರಾಷ್ಟ್ರಮಟ್ಟದ ನಾಯಕರೊಂದಿಗೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಹೃದಯಾಘಾತವಾದ ಕೂಡಲೇ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಸೂರಜ್ ಹೆಗ್ಡೆಯವರು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದರು. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿಎಂ ಡಿ.ಕೆ. ಶಿವಕುಮಾ‌ರ್ ಸೇರಿದಂತೆ ಹಲವು ಗಣ್ಯರು ಎಕ್ಸ್ ಮೂಲಕ ಸಂದೇಶ ಹಂಚಿಕೊಂಡಿದ್ದು, ಸೂರಜ್ ಹೆಗಡೆ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Home add -Advt

ಸಿಎಂ ಡಿ.ಕೆ. ಶಿವಕುಮಾರ್ ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದು ಸೂರಜ್ ಹೆಗ್ಡೆ ಅವರ ಅಗಲಿಕೆ ಸುದ್ದಿ ಕೇಳಿ ನನ್ನ ಮನಸಿಗೆ ಆಘಾತವಾಗಿದೆ. ಚಿಕ್ಕ ವಯಸ್ಸಿಗೇ ಅವರು ನಮ್ಮನ್ನು ಅಗಲಿದ್ದಾರೆ ಎಂಬುದನ್ನು ನಂಬಲು ಆಗುತ್ತಿಲ್ಲ. ಸೂರಜ್ ಹೆಗಡೆ ಅವರು ತಮ್ಮ ತಾತ ದೇವರಾಜು ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕು ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಬರೆದುಕೊಂಡಿದ್ದಾರೆ.

ಎಐಸಿಸಿ ಕಾರ್ಯದರ್ಶಿಗಳು, ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ರಾಜ್ಯ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾಗಿದ್ದ ನನ್ನ ಆತ್ಮೀಯ ಸಹೋದ್ಯೋಗಿ ಶ್ರೀ ಸೂರಜ್ ಹೆಗ್ಗಡೆ ಅವರ ಹಠಾತ್ ನಿಧನದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣ್ ದೀಪ್ ಸಿಂಗ್ ಸುರ್ಜೇವಾಲಾ ಅವರೂ ಸಹ ಈ ಕುರಿತು ಪ್ರತಿಕ್ರಿಯಿಸಿ, ತಮ್ಮ ತೀವ್ರ ಸಂತಾಪ ಸಲ್ಲಿಸಿದ್ದಾರೆ.

Related Articles

Back to top button