Kannada NewsLatestWorld

*ದಕ್ಷಿಣ ಫಿಲಿಪೈನ್ಸ್‌ನಲ್ಲಿ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಫಿಲಿಪೈನ್ಸ್‌ನ ಮಿಂಡಾನಾವೊದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.8 ತೀವ್ರತೆದಾಖಲಾಗಿದೆ. ಭೂಕಂಪದಿಂದಾಗಿ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಕಟ್ಟಡಗಳು ಧರಾಶಾಹಿಯಾಗಿವೆ. ಭೂಕಪಂದ ಬೆನ್ನಲ್ಲೇ ದಕ್ಷಿಣ ಫಿಲಿಪೈನ್ಸ್ ನಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜನರನ್ನು ಸ್ಥಳಾಂತರಿಸಲಾಗಿದೆ. ಕಡಲ ಅಲೆಗಳ ಏರಿಳಿತವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದ್ದು, ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ನೌಕಾಸೇನೆ ಮತ್ತು ಕರಾವಳಿ ರಕ್ಷಣಾ ಪಡೆಗಳು ಸನ್ನದ್ಧವಾಗಿವೆ.

ಭೂಕಂಪದ ಕೇಂದ್ರಬಿಂದು ಬುರಿಯಾಸ್​ನಿಂದ 24.7 ಕಿ.ಮೀ ದೂರದಲ್ಲಿದ್ದು, ಪತ್ತೆ ಹಚ್ಚಿ ತಕ್ಷಣ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ಮತ್ತು ಜಪಾನ್ ಹವಾಮಾನ ಇಲಾಖೆ ಜಂಟಿಯಾಗಿ ಫಿಲಿಪೈನ್ಸ್​, ಇಂಡೋನೇಷ್ಯಾ, ತೈವಾನ್ ಮತ್ತು ಜಪಾನ್ ಕರಾವಳಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಘೋಷಿಸಿವೆ.

ಫಿಲಿಪೈನ್ಸ್ ದೇಶವು ಪೆಸಿಫಿಕ್ ಮಹಾಸಾಗರದ “ರಿಂಗ್ ಆಫ್ ಫೈರ್” ಅಂದರೆ ಭೂಕಂಪನ ಸೂಕ್ಷ್ಮ ವಲಯ ವ್ಯಾಪ್ತಿಯಲ್ಲಿ ಇರುವುದರಿಂದ, ಇಲ್ಲಿನ ನಾಗರಿಕರು ಮತ್ತು ರಕ್ಷಣಾ ಪಡೆಗಳು ಇಂತಹ ಸವಾಲುಗಳನ್ನು ಎದುರಿಸಲು ಮೊದಲೇ ತರಬೇತಿ ಪಡೆದಿರುತ್ತಾರೆ. ಸರ್ಕಾರದ ತ್ವರಿತ ಸ್ಪಂದನೆ, ಡ್ರೋನ್ ತಂತ್ರಜ್ಞಾನದ ಕಣ್ಗಾವಲು ಮತ್ತು ನೆರೆರಾಷ್ಟ್ರಗಳ ಸೌಹಾರ್ದಯುತ ಬೆಂಬಲದಿಂದಾಗಿ ಮಿಂಡಾನಾವೊ ಪ್ರದೇಶವು ಅತ್ಯಂತ ವೇಗವಾಗಿ ಸಹಜ ಸ್ಥಿತಿಗೆ ಮರಳುತ್ತಿದ್ದು, ಪುನರ್ನಿರ್ಮಾಣ ಕಾರ್ಯಗಳು ಸಶಕ್ತವಾಗಿ ಆರಂಭಗೊಂಡಿವೆ.

Home add -Advt

Related Articles

Back to top button