Kannada NewsKarnataka NewsLatest

*ಪೆಟ್ರೋಲ್, ಡೀಸೆಲ್, ಸಿಲಿಂಡರ್ ಬಳಿಕ ಅಕ್ಕಿ ಬೆಲೆಯಲ್ಲಿ ಭಾರಿ ಏರಿಕೆ; ಗ್ರಾಹಕರು ಕಂಗಾಲು*

ಪ್ರಗತಿವಾಹಿನಿ ಸುದ್ದಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ತರಕಾರಿ ಬೆಲೆ ಗಗನಕ್ಕೇರಿರುವ ನಡುವೆಯೇ ಅಕ್ಕಿ ಬೆಲೆಯೂ ಭಾರಿ ಹೆಚ್ಚಳವಾಗಿದೆ. ದುಬಾರಿ ದುನಿಯಾದಲ್ಲಿ ಜನಸಾಮಾನ್ಯರು, ಮಧ್ಯಮ ವರ್ಗದ ಜನರು ಬದುಕುವುದೇ ದುಸ್ಥರವಾಗುತ್ತಿದೆ.

ವಿವಿಧ ತಳಿಯ ಅಕ್ಕಿ ದರದಲ್ಲಿ ಕೆ.ಜಿಗೆ 10 ರಿಂದ 20 ರೂಪಾಯಿವರೆಗೆ ಏರಿಕೆಯಾಗಿದ್ದು, ಇದರಿಂದ ಗ್ರಾಹಕರು ಕಂಗಾಲಾಗಿದ್ದಾರೆ. ದಿನದಿಂದ ದಿನಕ್ಕೆ ಅಗತ್ಯವಸ್ತುಗಳ ಬೆಲೆ ಗಗನ ಮುಖಿಯಾಗುತ್ತಿದ್ದು, ಆದಾಯ ಮಾತ್ರ ಕುಸಿತವಾಗುತ್ತಿದೆ. ಇದು ಗ್ರಾಹಕರಿಗೆ ಇನ್ನಷ್ಟು ಹೊರೆಯಾಗಿದೆ.

ಅಕ್ಕಿ ಬೆಲೆ ಹೆಚ್ಚಳಕ್ಕೆ ಕಾರಣ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದ್ದು, ಪೂರೈಕೆ ಕಡಿಮೆಯಾಗಿದೆ. ಇದರ ಜೊತೆಗೆ ವಿವಿಧ ದೇಶಗಳಿಗೆ ಅಕ್ಕಿ ರಫ್ತು ಮಾಡಲು ಕೇಂದ್ರ ಸರ್ಕಾರ ಅವಕಾಶ ನೀಡಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿಯ ಲಭ್ಯತೆ ಕಡಿಮೆಯಾಗಿದೆ. ಇದೇ ಕಾರಣದಿಂದ ಬೆಲೆ ಏರಿಕೆಯಾಗುತ್ತಿದೆ ಎಂದು ಸ್ಥಳೀಯ ವ್ಯಾಪಾರಿಗಳು ತಿಳಿಸಿದ್ದಾರೆ.

ಇನ್ನೂ ಹೊಸ ಅಕ್ಕಿ ಬೆಳೆ ನವೆಂಬರ್ ವೇಳೆಗೆ ಮಾರುಕಟ್ಟೆಗೆ ಬರುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಅಕ್ಕಿ ಕೊರತೆ ಮುಂದುವರಿಯುವ ಸಾಧ್ಯತೆ ಇದ್ದು, ಮುಂದಿನ ದಿನಗಳಲ್ಲಿ ದರ ಮತ್ತಷ್ಟು ಏರಿಕೆಯಾಗುವ ಆತಂಕ ಎದುರಾಗಿದೆ.

Home add -Advt

Related Articles

Back to top button