Karnataka NewsLatestPolitics

*ಮೂರು ಬಾರಿ ಮುಖ್ಯಮಂತ್ರಿ ಸ್ಥಾನ ಕೈತಪ್ಪಿತು ಎನ್ನುತ್ತಾ ಭಾವುಕರಾದ ಜಿ.ಪರಮೇಶ್ವರ್

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಾ.ಜಿ.ಪರಮೇಶ್ವರ್ ತನಗೆ ಮೂರು ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಕೈತಪ್ಪಿತು ಎನ್ನುತ್ತಾ ಭಾವುಕರಾದ ಘಟನೆ ನಡೆದಿದೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಪರಮೇಶ್ವರ್, ಮೂರು ಬಾರಿ ನನಗೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿತು. ನನ್ನ ಗ್ರಹಚಾರ, ಹಣೆಬರಹ ಸರಿಯಿರಲಿಲ್ಲ ಅಂತಾ ಕಾಣುತ್ತೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅಂದು 2013ರಲ್ಲಿ ಚುನಾವಣೆಯಲ್ಲಿ ಸೋಲನುಭವಿಸಿದೆ ಹೀಗಾಗಿ ಸಿಎಂ ಸ್ಥಾನ ಕೈತಪ್ಪಿತು. ಅಂದು ನಾನು ಗೆದ್ದಿದ್ದರೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುತ್ತಿರಲಿಲ್ಲ. ಆದರೆ ನನ್ನ ಹಣೆಬರಹ ಅಂದು ನಾನು ಸೋತೆ ಹಾಗಾಗಿ ಸಿಎಂ ಆಗಲು ಆಗಲಿಲ್ಲ. 2018ರಲ್ಲಿ ಮೈತ್ರಿ ಸರ್ಕಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆದರು. ಅಂದು ಕೂಡ ಮಾತುಕತೆ ನಡೆದಿದ್ದರೆ ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಬಹುದಿತ್ತು. ಆದರೆ ಯಾವುದೋ ಕಾರಣಕ್ಕೆ ಸಾಧ್ಯವಾಗಲಿಲ್ಲ. ಈ ಬಾರಿ 2026ರಲ್ಲಿ ಸಿಎಂ ಸ್ಥಾನ ನೀಡುವ ನಿರೀಕ್ಷೆ ಇತ್ತು. ಆದರೆ ರಾಜಕೀಯ ಕಾರಣಗಳಿಂದ ಅದು ಕೂಡ ಸಾಧ್ಯವಾಗಲಿಲ್ಲ ಎನ್ನುತ್ತಾ ಭಾವುಕರಾಗಿದ್ದಾರೆ.

Home add -Advt

ಈಗ ಸರ್ಕಾರದಲ್ಲಿ ನನಗೆ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಬಹಳ ಜವಾಬ್ದಾರಿಯುತ ಸ್ಥಾನ ನೀಡಿದ್ದಾರೆ. ಯಾವುದೇ ರೀತಿ ಕುಂದು ಬರದಂತೆ ಸರ್ಕಾರದಲ್ಲಿ ನಡೆದುಕೊಳ್ಳುತ್ತೇನೆ ಎಂದು ಹೇಳಿದರು.

Related Articles

Back to top button