Belagavi NewsBelgaum NewsKannada NewsKarnataka NewsPolitics

*ಕರ್ನಾಟಕ ಪರ ಗೊತ್ತುವಳಿ ಅಂಗೀಕರಿಸಲು ನಿರಾಕರಿಸುತ್ತಿರುವ  ಪಾಲಿಕೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಚಿವರಿಗೆ ಮನವಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಲು ನಿರಾಕರಿಸುತ್ತಿರುವ ಬೆಳಗಾವಿ ಮಹಾನಗರ ಪಾಲಿಕೆಯ ವಿರುದ್ಧ ಕ್ರಮಕ್ಕೆ  ಆಗ್ರಹಿಸಿ, ಕನ್ನಡ ನಾಡು, ನುಡಿ, ಗಡಿ ಹಿತಾಸಕ್ತಿ ವಿರೋಧಿ ನಿಲುವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು  ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ  ವತಿಯಿಂದ ಸಚಿವ ಸತೀಶ ಜಾರಕಿಹೊಳಿ ಅವರಿಗೆ  ಸೋಮವಾರ ಮನವಿ ಸಲ್ಲಿಸಲಾಯಿತು.

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಗಡಿವಿವಾದಕ್ಕೆ ಮಹಾಜನ ಆಯೋಗದ ವರದಿಯೇ ಅಂತಿಮ ಎಂಬ ಗೊತ್ತುವಳಿ ಅಂಗೀಕರಿಸಬೇಕೆಂದು ಆಗ್ರಹಿಸಿ ಬೆಳಗಾವಿಯ 20 ಕ್ಕೂ ಅಧಿಕ ಕನ್ನಡ ಸಂಘಟನೆಗಳು ಕಳೆದ ಮಾರ್ಚ 26 ರಿಂದ ಹೋರಾಟ ನಡೆಸಲಾಗಿದೆ ಮನವಿಯಲ್ಲಿ ತಿಳಿಸಿದ್ದಾರೆ. 

2005 ರ ಅಕ್ಟೋಬರ್ 27 ರಂದು ಬೆಳಗಾವಿ ಪಾಲಿಕೆಯಲ್ಲಿ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಸುಪ್ರೀಮ್ ಕೋರ್ಟನ್ನು ಕೋರುವ ಗೊತ್ತುವಳಿಯನ್ನು ಅಂಗೀಕರಿಸಲಾಗಿದೆ. ಈ ಗೊತ್ತುವಳಿಯನ್ನು ಮಹಾರಾಷ್ಟ್ರ ಸರಕಾರ ಸುಪ್ರೀಮ್ ಕೋರ್ಟಿನ ಮುಂದಿರುವ ಗಡಿ ವಿವಾದ ಪ್ರಕರಣದಲ್ಲಿ ಪೂರಕ ದಾಖಲೆಯನ್ನಾಗಿ ಬಳಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸದ್ಯ ಕನ್ನಡಿಗರೇ ಬಹುಮತ ಹೊಂದಿರುವ ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಯನ್ನು ಅಂಗೀಕರಿಸಬೇಕೆಂದು ಕಳೆದ 75 ದಿನಗಳಿಂದ ಹೋರಾಟ ನಡೆಸಿದರೂ  ಪಾಲಿಕೆಯಿಂದ  ಯಾವುದೇ ಸ್ಪಂದನೇ ದೊರೆತ್ತಿಲ್ಲ ಎಂದು ಮನವಿಯಲ್ಲಿ ಕಳವಳ ವ್ಯಕ್ತಪಡಿಸಿದರು.

 2004 ರಿಂದ ಸುಪ್ರೀಂ ಕೋರ್ಟಿನಲ್ಲಿ ಸ್ವೀಕಾರವಾಗದೆ ಹೊಸ್ತಿಲಲ್ಲಿರುವ ಗಡಿವಿವಾದ ಪ್ರಕರಣದಲ್ಲಿ ಮಹಾರಾಷ್ಟ್ರ ಸರಕಾರವು ಬೆಳಗಾವಿ ಪಾಲಿಕೆಯ ಗೊತ್ತುವಳಿಯನ್ನು ಪೂರಕ ದಾಖಲೆಯನ್ನಾಗಿ ಬಳಸುತ್ತಿದೆ. ಒಂದು ವರ್ಷದ ನಂತರ 2005 ರ ಅಕ್ಟೋಬರ್ 27 ರಂದು ಎಮ್ ಇಎಸ್ ಬಹುಮತದ ಪಾಲಿಕೆಯಲ್ಲಿ ಮಹಾರಾಷ್ಟ್ರ ಪರವಾದ ಗೊತ್ತುವಳಿಯನ್ನು ಪಾಸು ಮಾಡಲಾಯಿತು.   

Home add -Advt

ಈ ಹಿನ್ನೆಲೆಯಲ್ಲಿ ಈಗ ಕರ್ನಾಟಕ ಪರವಾದ ಗೊತ್ತುವಳಿ ಸ್ವೀಕರಿಸಬೇಕೆಂದು ಕನ್ನಡ ಸಂಘಟನೆಗಳು ಹೋರಾಟ ನಡೆಸಿವೆ. ಎರಡು ತಿಂಗಳಿಂದ ಹೋರಾಟ ನಡೆಸಿದ್ರು ಸಹ ಪಾಲಿಕೆಯಲ್ಲಿ 35 ಸದಸ್ಯರ ಬಹುಮತ ಹೊಂದಿರುವ ಬಿಜೆಪಿ ನಾಯಕರು ಗೊತ್ತುವಳಿ ಸ್ವೀಕರಿಸಿಲ್ಲ.  ಹೀಗಾಗಿ ಪಾಲಿಕೆಯ ಎದುರು ಇಡೀ ದಿನ  ಧರಣಿ ಸತ್ಯಾಗ್ರಹವನ್ನು ನಡೆಸಲಾಯಿತು.  ಗೊತ್ತುವಳಿ ಸ್ವೀಕರಿಸಲು ವಿಫಲವಾದ ಹಿನ್ನೆಲೆಯಲ್ಲಿ  20 ಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಬೆಳಗಾವಿಯಲ್ಲಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲಾಯಿತ್ತು, ಈ ವೇಳೆ  500 ಕ್ಕೂ ಅಧಿಕ ಕಾರ್ಯಕರ್ತರು ಬಂಧನ ಮಾಡಲಾಗಿತ್ತು ಎಂದು ಮನವಿ ಮೂಲಕ ಸಚಿವರಿಗೆ ತಿಳಿಸಿದರು.

ಕರ್ನಾಟಕ ವಿಧಾನ ಮಂಡಲವು ಹತ್ತಾರು ಬಾರಿ ಗೊತ್ತವಳಿಯನ್ನು ಅಂಗೀಕರಿಸಿ ಕೇಂದ್ರಕ್ಕೆ ಕಳಿಸಿದೆ. ಆದರೆ ಪಾಲಿಕೆಯ ಮಹಾಪೌರರು ಹಾಗೂ ಉಪಮಹಾಪೌರರು ಸುಪ್ರೀಮ್ ಕೋರ್ಟ ಮುಂದಿರುವ ಗಡಿವಿವಾದದ ಪ್ರಕರಣದ ನೆಪ ಹೇಳುತಿದ್ದಾರೆ.  ಸುಪ್ರೀಮ್ ಕೋರ್ಟಿನ ಹಿರಿಯ ನ್ಯಾಯವಾದಿ  ಮೋಹನ ಕಾತರಕಿ ಅವರು ತಮ್ಮ ಕಾನೂನಾತ್ಮಕ ಅಭಿಪ್ರಾಯ ನೀಡಿದ್ದು,  ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಲು ಯಾವುದೇ ಕಾನೂನು ತೊಡಕಿಲ್ಲವೆಂದು ಅಖಿತವಾಗಿ ತಿಳಿಸಿದ್ದಾರೆ. ಆದರೂ ಸಹಿತ ಮಹಾಪೌರರು ಹಾಗೂ ಉಪಮಹಾಪೌರರು ತಮ್ಮ ಮೊಂಡುವಾದವನ್ನು ಮುಂದುವರೆಸಿದ್ದಾರೆ.

ಕನ್ನಡ ಪರ ಸಂಘಟನೆಗಳು ಹೋರಾಟದ ಭಾಗವಾಗಿ ಜೂನ್ 1 ರಿಂದ ಪ್ರತಿದಿನ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸುತ್ತಿವೆ. ಆದರೂ ಯಾವುದೇ ಸ್ಪಂದನೆ ದೊರತ್ತಿಲ್ಲ, ಈ ಮೂಲಕ ರಾಜ್ಯ ಸರಕಾರದ ಗಮನ ಸೆಳೆಯಾಗುವುದು ಎಂದು ಮನವಿ ಮಾಡಿಕೊಂಡರು. 

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ  ಹಾಗೂ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ಅಶೋಕ ಚಂದರಗಿ, ಮಹಾದೇವ ತಳವಾರ, ಬಲರಾಮ ಮಾಸೇನಟಿ,  ಶ್ರೀನಿವಾಸ ತಾಳೂಕರ್‌, ಮಲ್ಲಪ್ಪ ಗುಡಗೇನಟ್ಟಿ, ರವಿ ಜಗಮೈನ್ನವರ,  ಸರ್ವಮಂಗಳಾ ಅರಳಿಕಟ್ಟಿ,  ಸಿದ್ದಲಿಂಗಪ್ಪ ಸುನಕುಪ್ಪಿ ಹಾಗೂ ಇತರರು ಇದ್ದರು.

Related Articles

Back to top button