Belagavi NewsBelgaum NewsKannada NewsKarnataka NewsLatest

*ರಾಜ್ಯಾದ್ಯಂತ ಇಂದು ಭಾರಿ ಮಳೆ: ಐದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಈಗಾಗಲೇ ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಹಲವು ಅವಾಂತರಗಳು ನಡೆದಿದೆ. ಈ ಮಧ್ಯೆ ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ‘ರೆಡ್ ಅಲರ್ಟ್‌’ ನೀಡಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ರಾಯಚೂರು, ಕಲಬುರಗಿ, ಕೊಪ್ಪಳ ಹಾಗೂ ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು ‘ಯಲ್ಲೋ ಅಲರ್ಟ್‌’ ಘೋಷಿಸಲಾಗಿದೆ.

ಇನ್ನು ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಸಂಜೆ ಹಾಗೂ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗಲಿದ್ದು ಮುನ್ನೆಚ್ಚರಿಕೆಯಾಗಿ ಆಯಾ ಜಿಲ್ಲಾಡಳಿತಗಳು ಮತ್ತು ವಿಪತ್ತು ನಿರ್ವಹಣಾ ತಂಡಗಳು ಸಂಪೂರ್ಣ ಸಜ್ಜಾಗಿವೆ. 

Home add -Advt

Related Articles

Back to top button