Kannada NewsKarnataka NewsLatest

*ಬಿಟ್ ಕಾಯಿನ್ ಹಗರಣ: ಮೊಹಮ್ಮದ್ ನಲಪಾಡ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎಸ್ ಐಟಿ ಅಧಿಕಾರಿಗಳು ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಮೊಹಮ್ಮದ್ ನಲಪಾಡ್, ಕಿಂಗ್ ಪಿನ್ ಶ್ರೀಕಿ, ರಾಬಿನ್ ಖಂಡೆವಾಲಾ ಸೇರಿದಂತೆ ಇತರರ ವಿರುದ್ಧ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಚಾರ್ಜ್ ಶೀಟ್ ನಲ್ಲಿ ನಲಪಾಡ್ ಗೆ ಹಣ ಸಂದಾಯವಾಗಿರುವ ಬಗ್ಗೆ ಉಲ್ಲೇಖಿಸಲಾಗಿದೆ. ಬಿಟ್ ಕಾಯಿನ್ ನಗದೀಕರಣಕ್ಕೆ ಶ್ರೀಕಿ ನಲಪಾಡ್ ಸಂಪರ್ಕದಲ್ಲಿದ. ಸ್ನೇಹಿತರ ಮೂಲಕ ನಲಪಾಡ್ ಹಣ ನಗದೀಕರಣ ಮಾಡಿರುವುದಾಗಿ ಉಲ್ಲೇಖಿಸಲಾಗಿದೆ. ಮುಂಬೈ ಮೂಲದ ಸ್ನೇಹಿತನ ಮೂಲಕ ಹವಾಲಾ ರೂಪದಲ್ಲಿ ಹಣ ನಗದೀಕರಣವಾಗಿದೆ. ಕಮಿಷನ್ ನಲ್ಲಿ ಮೊಹಮ್ಮದ್ ನಲಪಾಡ್ ಗೂ ಪಾಲು ಹೋಗಿದ್ದು ಪತ್ತೆಯಾಗಿದೆ. ಈ ವಿಚಾರವನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ಬಿಟ್ ಕಾಯಿನ್ ಹಗರಣದ ಕೇಸ್ ಬಗ್ಗೆ ಜಾರಿ ನಿರ್ದೇಶನಾಲಯ-ಇಡಿಯಿಂದಲೂ ತನಿಖೆ ನಡೆಯುತ್ತಿದೆ. ನಲಪಾಡ್, ಶ್ರೀಕಿ ಸೇರಿ ಕೆಲವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಶ್ರೀಕಿ, ಸುನೀಶ್ ಹೆಗ್ಡೆ, ರಾಬಿನ್ ಖಂಡೇವಾಲನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಆರೋಪಿಗಳ ವಿಚಾರಣೆ ಬಳಿಕ ನಲಪಾಡ್ ಗೂ ನೋಟಿಸ್ ಜಾರಿ ಮಾಡಿದ್ದರು. ಎರಡು ಬಾರಿ ಇಡಿ ಅಧಿಕಾರಿಗಳು ನಲಪಾಡ್ ಗೆ ನೋಟಿಸ್ ನೀಡಿದ್ದಾರೆ. ಈಗ ಮೂರನೇ ಬಾರಿ ನೋಟಿಸ್ ನೀಡಲು ಇಡಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಈ ನಡುವೆ ಎಸ್ ಐಟಿ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Home add -Advt

Related Articles

Back to top button