
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಭೀಕರ ಅಪಘಾತ: ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ- ಬೈಕ್ ನಡುವೆ ಡಿಕ್ಕಿ: ದಂಪತಿ ಸ್ಥಳದಲ್ಲೇ ದುರ್ಮರಣ
ಸಿಲಿಂಡರ್ ತುಂಬಿದ್ದ ಲಾರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ತಿರುವ ಘಟನೆ ನಡೆದಿದೆ.
ಬೆಂಗಳೂರಿನ ಗೊರಗುಂಟೆ ಪಾಳ್ಯದ ಬಳಿ ಈ ಅಪಘಾತ ಸಂಭವಿಸಿದೆ. ಗ್ಯಾಸ್ ಸಿಲಿಂದರ್ ತುಂಬಿದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿ ಹೋಗುತ್ತಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಯಶವಂತಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




