Belagavi NewsBelgaum NewsKannada NewsKarnataka News

*ಜೂನ್ 12 ರಂದು ಬೆಳಗಾವಿಯಲ್ಲಿ ವಿದ್ಯುತ್ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಜೂನ್ 12 2026 ರಂದು ಬೆಳಗ್ಗೆ 11 ಘಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ 110 ಕೆ.ವಿ. ಹುದಲಿ ಉಪಕೇಂದ್ರದಿಂದ ಸರಬರಾಜು ಆಗುವ ಹುದಲಿ, ನಂದಿ ಕುಡಿಯುವ ನೀರಿನ ಘಟಕ, ಕುಮರಿ, ರಂಗದೋಳಿ, ತುಮ್ಮರಗುದ್ದಿ, ಸೋಮನಟ್ಟಿ, ಕಬಲಾಪೂರ, ಚಂದೂರ, ಖನಗಾಂವ ಕೆ.ಎಚ್, ಖನಗಾಂವ ಬಿ.ಕೆ, ಅಷ್ಟೆ, ಮುಚ್ಚಂಡಿ, ಕಲಕಾಂಬ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ. ಕಾ ಮತ್ತು ಪಾ ಗ್ರಾಮೀಣ ವಿಭಾಗ ಕಾರ್ಯನಿರ್ವಾಹಕ ಇಂಜಿನೀಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button