Belagavi NewsBelgaum NewsKannada NewsKarnataka NewsLatest

*ಜೂ.21ರಂದು ಜಗನ್ನಾಥರಾವ್ ಜೋಶಿ ಸ್ಮಾರಕ ಭವನ ಲೋಕಾರ್ಪಣೆ* *ದತ್ತಾತ್ರೇಯ ಹೊಸಬಾಳೆ ಉಪಸ್ಥಿತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕರ್ನಾಟಕ ಕೇಸರಿ ಎಂದೇ ಖ್ಯಾತರಾಗಿದ್ದ ಮಾಜಿ ಸಂಸದ ದಿ. ಶ್ರೀ ಜಗನ್ನಾಥರಾವ್ ಜೋಶಿಯವರ ಅವರ ಹೆಸರಿನಲ್ಲಿ ಬೆಳಗಾವಿಯಲ್ಲಿ ನಿರ್ಮಿಸಲಾಗಿರುವ *ಶ್ರೀ ಜಗನ್ನಾಥರಾವ್ ಜೋಶಿ ಸ್ಮಾರಕ ಭವನ*ವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವ ಲೋಕಾರ್ಪಣೆ ಸಮಾರಂಭ ಜೂನ್ 21ರಂದು ನಡೆಯಲಿದೆ.

ಜನಕಲ್ಯಾಣ ಟ್ರಸ್ಟ್, ಬೆಳಗಾವಿ ವತಿಯಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮವು ನಗರದ ಗೂಡ್ಸ್ ಶೆಡ್ ರಸ್ತೆಯ ಸಂಘ ಸಧನದಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ಜರುಗಲಿದೆ.

ಕಾರಂಜಿಮಠದ ಶ್ರೀ ಗರುಸಿದ್ಧ ಮಹಾಸ್ವಾಮಿಗಳು  ದಿವ್ಯ ಸಾನ್ನಿಧ್ಯ ವಹಿಸಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಸ್ಮಾರಕ ಭವನವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಅಧ್ಯಕ್ಷತೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಂಚಾಲಕ ಬಸವರಾಜ ದಂಬಳ ವಹಿಸಲಿದ್ದಾರೆ.

Home add -Advt

 ಜಗನ್ನಾಥರಾವ್ ಜೋಶಿಯವರ ರಾಷ್ಟ್ರಸೇವೆಯ ಆದರ್ಶ, ತ್ಯಾಗ ಮತ್ತು ಸಮಾಜಮುಖಿ ಚಿಂತನೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಈ ಸ್ಮಾರಕ ಭವನವನ್ನು ನಿರ್ಮಿಸಲಾಗಿದೆ ಎಂದು

ಜನಕಲ್ಯಾಣ ಟ್ರಸ್ಟ್ ನಿರ್ವಾಹಕ ವಿಶ್ವಸ್ಥ ಅರವಿಂದರಾವ್ ದೇಶಪಾಂಡೆ ತಿಳಿಸಿದ್ದಾರೆ.

ಕೇವಲ ಆಮಂತ್ರಿತರಿಗೆ ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿದೆ.

Related Articles

Back to top button